Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿ.ಪಿ.ಯೋಗೇಶ್ವರ್ ವಿರುದ್ದ ಕ್ರಮಕ್ಕೆ ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಏ.28) : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸರ್ಕಾರದಿಂದ ಯಾವುದೇ ಅನುದಾನ ನೀಡಬಾರದೆಂದು ಕೀಳಾಗಿ ಮಾತನಾಡಿರುವ ಸಿ.ಪಿ.ಯೋಗೇಶ್ವರ್ ವಿರುದ್ದ ಕ್ರಮ ಕೈಗೊಳ್ಳುವಂತೆ ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ ಚುನಾವಣಾಧಿಕಾರಿಗೆ ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ. ಅಭ್ಯರ್ಥಿಯಾಗಿ ಸ್ಪರ್ಧಿಸಿರುವ  ಸಿ.ಪಿ.ಯೋಗೇಶ್ವರ್ ಪರಿಶಿಷ್ಟ ಜಾತಿ ಮತ್ತು ವರ್ಗದವರ ಮನಸ್ಸಿಗೆ ನೋವಾಗುವ ರೀತಿಯಲ್ಲಿ ಅವಹೇಳನವಾಗಿ ಮಾತನಾಡಿರುವುದಲ್ಲದೆ ಸರ್ಕಾರದಿಂದ ನೀಡುತ್ತಿರುವ ಅನುದಾನವನ್ನು ನಿಲ್ಲಿಸುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ದಲಿತರು ಉದ್ದಾರವಾದರೆ ಬಿಜೆಪಿ. ಓಟು ಹಾಕುವುದಿಲ್ಲವೆಂದು ಖಾಸಗಿ ಟಿ.ವಿ.ಚಾನಲ್‍ನಲ್ಲಿ ಮಾತನಾಡಿದ್ದಾರೆ.

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಿ.ಪಿ.ಯೋಗೇಶ್ವರ್‍ರವರನ್ನು ಅಭ್ಯರ್ಥಿ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಹನುಮಂತಪ್ಪ ದುರ್ಗ ಆಗ್ರಹಿಸಿದರು.

ದೇವರಾಜ್, ನ್ಯಾಯವಾದಿ ಡಿ.ವೆಂಕಟೇಶ್, ಓ.ಸೋಮಣ್ಣ, ವಿಜಯ್‍ಕುಮಾರ್, ಟಿ.ಚಂದ್ರಪ್ಪ, ಟಿ.ನಾಗರಾಜ್, ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್, ಟಿ.ಶೇಖರಪ್ಪ ಪತ್ರಿಕಾಗೋಷ್ಠಿಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!