Maha Kumbh 2025: ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ : ಗಮನಸೆಳೆಯುತ್ತಿರುವ ಬಾಬಾಗಳು

ಸುದ್ದಿಒನ್ : ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಘೋರಿಗಳು ಅಲ್ಲಿನ ಬೀದಿಗಳಲ್ಲಿ ಕುಣಿದು ಕುಪ್ಪಳಿಸುವ ಮೂಲಕ ಭಕ್ತರನ್ನು ಉತ್ತೇಜಿಸುತ್ತಿದ್ದಾರೆ.

ಇನ್ನೊಂದೆಡೆ ಕುಂಭಮೇಳಕ್ಕೆ ವಿವಿಧ ಬಾಬಾಗಳು ಬರುತ್ತಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಇಲ್ಲಿ ಕಾಣಸಿಗುವ ರುದ್ರಾಕ್ಷ ಬಾಬಾ ವಿಶೇಷ. 11 ಸಾವಿರ ರುದ್ರಾಕ್ಷಗಳಿಂದ ಅವರ ಅಲಂಕಾರ ಎಲ್ಲರ ಗಮನ ಸೆಳೆಯುತ್ತಿದೆ. 30 ಕೆಜಿ ತೂಕದ ಈ ಆಭರಣದೊಂದಿಗೆ ರುದ್ರಾಕ್ಷ ಬಾಬಾ ಕಾಣಿಸಿಕೊಳ್ಳುತ್ತಿದ್ದಾನೆ. ಇವರಿಂದ ರುದ್ರಾಕ್ಷ ಪಡೆದರೆ ಎಲ್ಲವೂ ಸರಿ ಹೋಗುತ್ತದೆ ಎಂಬುದು ಭಕ್ತರ ನಂಬಿಕೆ.

ಪರಿಸರ ಬಾಬಾ ಕೂಡ ಗಮನ ಸೆಳೆಯುತ್ತಿದ್ದಾರೆ. ಅವರು ಪೂರ್ಣ ಅಲಂಕಾರಗಳೊಂದಿಗೆ ಕೈಯಲ್ಲಿ ಸರ್ಪದಂಡದೊಂದಿಗೆ ಕಾಣಿಸಿಕೊಂಡಿದ್ದಾರೆ. ಈ ಬಾಬಾ ಚಿನ್ನದ ಕನ್ನಡಕ ಮತ್ತು ಕೊರಳಲ್ಲಿ ಚಿನ್ನದ ರುದ್ರಾಕ್ಷಿಗಳೊಂದಿಗೆ ಬೆರಗುಗೊಳಿಸಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ವಿಶೇಷ ಟೆಂಟ್‌ ಹಾಕಿಕೊಂಡು ಭಕ್ತರಿಗೆ ಆಶೀರ್ವಾದ ಮಾಡುತ್ತಿದ್ದಾರೆ. ಪರಿಸರ ಸಂರಕ್ಷಣೆಯ ಅಭಿಯಾನವನ್ನೂ ಮಾಡುತ್ತಿದ್ದಾರೆ. ಪರಿಸರ ಬಾಬಾ ಅವರು ಹಲವಾರು ದಶಕಗಳಿಂದ ಈ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳುತ್ತಾರೆ.

ಅಂಬಾಸಿಡರ್ ಬಾಬಾ ಕೂಡ 1972 ರ ಮಾಡೆಲ್ ಅಂಬಾಸಿಡರ್ ಕಾರಿನಲ್ಲಿ ಪ್ರಯಾಗರಾಜ್ ತಲುಪಿದ್ದಾರೆ. ಅವರ ಅಂಬಾಸಿಡರ್ ಕಾರು ಭಕ್ತರನ್ನು ಸೆಳೆಯುತ್ತಿದೆ. 35 ವರ್ಷಗಳಿಂದ ಇದೇ ಅಂಬಾಸಿಡರ್ ಕಾರನ್ನು ಬಳಸುತ್ತಿದ್ದೇನೆ ಎನ್ನುತ್ತಾರೆ ಬಾಬಾ. ಇದು ಅವರ ವಾಹನ ಇದು ಅವರ ಮನೆ ಎನ್ನುತ್ತಾರೆ. ಇಂದೋರ್‌ನಿಂದ ಪ್ರಯಾಗ್‌ರಾಜ್‌ಗೆ ತಲುಪಲು 36 ಗಂಟೆ ತೆಗೆದುಕೊಂಡರೂ ಯಾವುದೇ ಪ್ರಯಾಸವಾಗಲಿಲ್ಲ ಎಂದು ಅವರು ಹೇಳುತ್ತಾರೆ.

suddionenews

Recent Posts

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

2 hours ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

3 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

12 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

12 hours ago

ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿ.ಪಂ ಸಿಇಒ

ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

12 hours ago

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು  ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…

12 hours ago