Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಹಾ ಶಿವರಾತ್ರಿ : ಚಿತ್ರದುರ್ಗದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 26 : ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ನಗರದ ಬಹುತೇಕ ದೇವಾಲಯಗಳಲ್ಲಿ ಬುಧವಾರ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.


ಕೆಳಗೋಟೆಯಲ್ಲಿರುವ ಬೇಡರ ಕಣ್ಣಪ್ಪ ದೇವಸ್ಥಾನದಲ್ಲಿ ಶಿವನಿಗೆ ಪ್ರಿಯವಾದ ಬಿಲ್ವಪತ್ರೆ ಹಾಗೂ ಹೂವುಗಳಿಂದ ಅಲಂಕರಿಸಿ ಪೂಜಿಸಲಾಯಿತು.

ಉಚ್ಚಂಗಿ ಯಲ್ಲಮ್ಮ ದೇವಿ

 


ಕೋಟೆ ರಸ್ತೆ, ಆನೆ ಬಾಗಿಲು ಸಮೀಪವಿರುವ ಪಾತಾಳೇಶ್ವರ ದೇವಾಲಯದಲ್ಲಿ ಶಿವನನ್ನು ಸಿಂಗರಿಸಿ ಬೆಳಗಿನಿಂದ ರಾತ್ರಿಯಿಡಿ ಭಕ್ತಿಯಿಂದ ಪೂಜೆ ಸಲ್ಲಿಸಲಾಯಿತು.

ಸಿದ್ದಾಪುರದಲ್ಲಿ ಅಭಿಷೇಕ :  ಶ್ರೀ ಸಿದ್ದೇಶ್ವರ ಶ್ರೀ ಕಲ್ಲೇಶ್ವರ ಶ್ರೀ ಮಲ್ಲೇಶ್ವರ ಹಾಗೂ ಶ್ರೀ ವೀರಭದ್ರ ಸ್ವಾಮಿ ಪೂಜಾ ಮಹಾಮಂಗಳಾರತಿ ನಡೆಯಿತು.

ಗಾರೆ ಬಾಗಿಲು ಈಶ್ವರ ದೇವಸ್ಥಾನ, ಉಚ್ಚಂಗಿಯಲ್ಲಮ್ಮ, ಹೊಳಲ್ಕೆರೆ ರಸ್ತೆಯಲ್ಲಿರುವ ನೀಲಕಂಠೇಶ್ವರ ದೇವಸ್ಥಾನದಲ್ಲಿ ವರ್ಣರಂಜಿತವಾಗಿ ಅಲಂಕರಿಸಿ ಪೂಜಿಸಲಾಯಿತು.


ನೆತ್ತಿ ಸುಡುವ ಬಿಸಿಲನ್ನು ಲೆಕ್ಕಿಸದೆ ಗಾಯತ್ರಿ ಭವನ್ ಸರ್ಕಲ್‍ನಿಂದ ಹಿಡಿದು ದೇವಸ್ಥಾನದವರೆಗೆ ಸಹಸ್ರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ನೀಲಕಂಠೇಶ್ವರ ಸ್ವಾಮಿಯ ದರ್ಶನ ಪಡೆದರು.

ಸಂಜೆ ಏಳು ಗಂಟೆಯ ನಂತರ ಎಲ್ಲಾ ದೇವಸ್ಥಾನಗಳಲ್ಲಿಯೂ ಭಕ್ತರು ಶ್ರದ್ಧಾ ಭಕ್ತಿಗಳಿಂದ, ಶಿವನಿಗೆ ಭಕ್ತಿ ಸಮರ್ಪಿಸಿದರು. ಕೆಲವು ದೇವಾಲಯಗಳಲ್ಲಿ ಭಜನೆ ಏರ್ಪಡಿಸಲಾಗಿದೆ. ಅಲ್ಲಲ್ಲಿ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.

ಗಾಂಧಿ ವೃತ್ತದ ನಾಲ್ಕು ಕಡೆ ಹೂವು ಹಣ್ಣುಗಳ ವ್ಯಾಪಾರದಿಂದ ಸಂಚಾರ ದಟ್ಟಣೆಯಿಂದ ಕೂಡಿ ವಾಹನಗಳು ಹಾಗೂ ಪಾದಚಾರಿಗಳ ಓಡಾಟಕ್ಕೆ ಕಷ್ಟವಾಗಿತ್ತು,

ಸಂತೆಹೊಂಡದ ರಸ್ತೆ ಒಂದು ಬದಿಯಲ್ಲಿ ಹಣ್ಣು, ಹೂವು. ಕಬ್ಬು ಮಾರಾಟ ಹಾಗೂ ಮತ್ತೊಂದು ಬದಿಯಲ್ಲಿ ತರಕಾರಿ ಮಾರುಕಟ್ಟೆಯಿರುವುದರಿಂದ ದ್ವಿಚಕ್ರ ವಾಹನ ಸವಾರರು ಕಸರತ್ತು ಮಾಡುವಂತಾಗಿತ್ತು. ಮೊದಲೆ ಕಿಷ್ಕಿಂದೆಯಾಗಿರುವ ಈ ರಸ್ತೆಯಲ್ಲಿ ಬಸ್, ಆಟೋ, ಪಾದಚಾರಿಗಳು ಸಂಚರಿಸಬೇಕಾಗಿರುವುದರಿಂದ ಸಂಚಾರಿ ಪೊಲೀಸರು ಟ್ರಾಫಿಕ್ ಕಂಟ್ರೋಲ್ ಮಾಡುವಲ್ಲಿ ಹೈರಾಣಾಗಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...