ಪಕ್ಷದ ಪರ ಪ್ರಾಮಾಣಿಕ ಕೆಲಸ ಪರಿಗಣಿಸಿ ಸೂಕ್ತ ಸ್ಥಾನಮಾನ ನೀಡುವಂತೆ ಮಹಡಿ ಶಿವಮೂರ್ತಿ ಮನವಿ

suddionenews
1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.11) : ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ 1993 ರಿಂದಲೂ ಪಕ್ಷಕ್ಕೆ ನಿಷ್ಟಾವಂತನಾಗಿ ಸೇವೆ ಸಲ್ಲಿಸುತ್ತ ಐದು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ವೃತ್ತಿಪರ ವಿಭಾಗದ ಅಧ್ಯಕ್ಷನಾಗಿ ಪಕ್ಷ ಸಂಘಟನೆಗೆ ಶ್ರಮಿಸುತ್ತಿರುವ ನಗರಸಭೆ ಮಾಜಿ ಸದಸ್ಯ ಮಹಡಿ ಶಿವಮೂರ್ತಿ ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನಾಗಿ ಇಲ್ಲವೇ ರಾಜ್ಯದ ಯಾವುದಾದರೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‍ಗೆ ಶಿಫಾರಸ್ಸು ಮಾಡುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್‍ರವರಿಗೆ ಮನವಿ ಸಲ್ಲಿಸಿದ್ದಾರೆ.

ವಿಧಾನಪರಿಷತ್ ಸದಸ್ಯರಾಗಿದ್ದ ಎಂ.ವಿವೇಕಾನಂದಯ್ಯನವರ ಪುತ್ರನಾಗಿರುವ ನಾನು ವಿದ್ಯಾರ್ಥಿ ದೆಸೆಯಿಂದಲೂ ಸಮಾಜ ಸೇವೆಯನ್ನು ಮೈಗೂಡಿಸಿಕೊಂಡು ಬಂದಿದ್ದೇನೆ. ಮೂವತ್ತು ವರ್ಷದ ನಂತರ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದರ ಹಿಂದೆ ಅಪಾರ ಶ್ರಮಪಟ್ಟಿದ್ದೇನೆ. ಇಲ್ಲಿಯವರೆಗೂ ನಡೆದ ಎಲ್ಲಾ ಚುನಾವಣೆಗಳಲ್ಲೂ ಪಕ್ಷದ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷನಾಗಿ ರೋಟರಿ ಕ್ಲಬ್ ಅಧ್ಯಕ್ಷನಾಗಿ ಕೂಡ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪನವರ ಅನುಯಾಯಿಯಾಗಿರುವ ನಾನು ಪಕ್ಷಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನಾಗಲಿ ಇಲ್ಲವೇ ರಾಜ್ಯದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವಂತೆ ಮಹಡಿ ಶಿವಮೂರ್ತಿ ಡಿಸಿಸಿ. ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮೂಲಕ ಕೆ.ಪಿ.ಸಿ.ಸಿ. ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‍ರವರಲ್ಲಿ ವಿನಂತಿಸಿದ್ದಾರೆ.

ಮಹಡಿ ಶಿವಮೂರ್ತಿಯನ್ನು ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಇಲ್ಲ ರಾಜ್ಯದ ಯಾವುದಾದರೂ ನಿಗಮ ಮಂಡಳಿ ಅಧ್ಯಕ್ಷನಾಗಿ ನೇಮಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಆನಂದ್ ಜೆ. ಇವರು ಅರಣ್ಯ ಮತ್ತು ಪರಿಸರ ಸಚಿವ ಈಶ್ವರಖಂಡ್ರೆಯವರಲ್ಲಿ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *