ಸುದ್ದಿಒನ್ :ಪ್ರಯಾಗ್ರಾಜ್ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಕುರಿತು ಉತ್ತರ ಪ್ರದೇಶ ಸರ್ಕಾರ ಸ್ಪಷ್ಟನೆ ನೀಡಿದೆ. ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದಾರೆ ಎಂದು ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ. 90 ಮಂದಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ 25 ಮಂದಿಯನ್ನು ಗುರುತಿಸಲಾಗಿದೆ ಎಂದು ಡಿಐಜಿ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮತ್ತು ಪ್ರಯಾಗರಾಜ್ ಕಾಲ್ತುಳಿತದ ನಂತರ, ಅಖಾಡ ಪರಿಷತ್ತು ಒಂದು ಪ್ರಮುಖ ಘೋಷಣೆ ಮಾಡಿದೆ. ಎರಡನೇ ದಿನವೂ ಅಮೃತ ಸ್ನಾನ ರದ್ದು ಮಾಡಲಾಗುತ್ತಿದೆ ಎಂದು ಅಖಿಲ ಭಾರತ ಅಖಾಡ ಪರಿಷತ್ ಅಧ್ಯಕ್ಷ ರವೀಂದ್ರ ಪುರಿ ತಿಳಿಸಿದ್ದಾರೆ. ಆದರೆ ಸಿಎಂ ಯೋಗಿ ಮನವಿ ಮೇರೆಗೆ ಮತ್ತೆ ಸ್ನಾನಕ್ಕೆ ತೆರಳಲು ನಿರ್ಧರಿಸಿದ್ದಾರೆ.
ಮಹಾಕುಂಭ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ ಎಂದು ಸಾಧ್ವಿ ನಿರಂಜನ ಜ್ಯೋತಿ ಹೇಳಿದರು. ಪಿತೂರಿ ನಡೆದಿದೆಯೇ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಸಾಧ್ವಿ ನಿರಂಜನ್ ಜ್ಯೋತಿ ಹೇಳಿದ್ದಾರೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ಯುಪಿ ಸಿಎಂ ಯೋಗಿ ಅವರೊಂದಿಗೆ ಮಾತನಾಡಿದ್ದಾರೆ. ಘಟನೆ ಕುರಿತು ವಿಚಾರಿಸಿದ ಅವರು, ತುರ್ತಾಗಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳನ್ನು ಪರಿಶೀಲಿಸಿದರು. ಕಾಲ್ತುಳಿತ ಘಟನೆಯಿಂದ ಮಹಾಮಂಡಲೇಶ್ವರ ಪ್ರೇಮಾನಂದ ಪುರಿ ಕಣ್ಣೀರಿಟ್ಟಿದ್ದಾರೆ. ಭದ್ರತಾ ವ್ಯವಸ್ಥೆಯಲ್ಲಿ ಯುಪಿ ಸರ್ಕಾರ ವಿಫಲವಾಗಿದೆ ಎಂದು ಅವರು ಟೀಕಿಸಿದರು.
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…
ಮೋಕ್ಷಿತಾ ಬಿಗ್ ಬಾಸ್ ಮನೆಯೊಳಗೆ ಇದ್ದಾಗ ಮಗುವಿನ ಕಿಡ್ನ್ಯಾಪ್ ಕೇಸ್ ಒಂದು ಸಿಕ್ಕಾಪಟ್ಟೆ ಚರ್ಚೆಯಾಗಿತ್ತು. ಟ್ಯೂಷನ್ ಮಾಡ್ತಾ ಇದ್ದಂತ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜನವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜನವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,…