ಬೆಂಗಳೂರು: ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದಾನೂ ಜನ ಪ್ರಯಾಗ್ ರಾಜ್ ಗೆ ಭೇಟಿ ನೀಡಿ,ಈ ಸಂಗಮದಲ್ಲಿ ಮುಳುಗೆದ್ದು ಬರ್ತಿದ್ದಾರೆ. ಕಾಂಗ್ರೆಸ್ ನಾಯಕರಲ್ಲಿ ಪ್ರಯಾಗ್ ರಾಜ್ ಸಂಗಮದ ಬಗ್ಗೆ ಒಬ್ಬೊಬ್ಬರಲ್ಲಿ ಒಂದೊಂದು ಅಭಿಪ್ರಾಯವಿತ್ತು. ಹೀಗಾಗಿ ಹಲವರು ಹೋಗಿರಲಿಲ್ಲ. ಆದರೆ ಡಿಸಿಎಂ ಡಿಕೆ ಶಿವಕುಮಾರ್ ಕುಟುಂಬ ಪ್ರಯಾಗ್ ರಾಜ್ ಗೆ ಹೋಗಿ, ಸ್ನಾನ ಮಾಡಿ, ಪೂಜೆ ಸಲ್ಲಿಸಿ ಬಂದಿದ್ದರು. ಈ ಸಂಬಂಧ ಇದೀಗ ಪ್ರಶ್ನೆ ಎದುರಾಗಿದೆ.

ಉದಯಪುರದಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯ ನಡೆಸುತ್ತಿರುವ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಭಾಗಿಯಾಗಿದ್ದು, ಈ ವೇಳೆ ಮಾತನಾಡಿದ ಅವರು, ಕೇಂದ್ರ ಸಚಿವರನ್ನು ಭೇಟಿಯಾಗಿ ಈ ಹಿಂದೆ ಘೋಷಿಸಲಾಗಿರುವ ಅನುದಾನ ಹಾಗೂಮಹಾದಾಯಿ, ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು.ಈ ಸಮ್ಮೇಳನ ಎಲ್ಲಾ ರಾಜ್ಯಗಳ ಸಚಿವರುಗಳನ್ನು ಒಗ್ಗೂಡಿಸಿದೆ. ಈ ಮೂಲಕ ಎಲ್ಲಾ ರಾಜ್ಯಗಳ ಅತ್ಯುತ್ತಮ ನೀರಾವರಿ ವ್ಯವಸ್ಥೆಗಳ ಪರಿಚಯವಾಗುತ್ತದೆ. ಇದರ ಜೊತೆಗೆ ನಮ್ಮಲ್ಲಿರುವ ಸಮಸ್ಯೆಗಳನ್ನು ಅರಿತು, ಅವುಗಳನ್ನು ಕೇಂದ್ರ ಜಲಶಕ್ತಿ ಸಚಿವಾಲಯದ ಮುಂದೆ ಇಡಬಹುದಾಗಿದೆ ಎಂದಿದ್ದಾರೆ.

ಇದೆ ವೇಳೆ ಪ್ರಯಾಗ್ ರಾಜ್ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಲ್ಲ ಎಂದು ಹೇಳಲಾಗುತ್ತಿದೆ ಆ ಬಗ್ಗೆ ಏನು ಹೇಳ್ತೀರಾ ಎಂದು ಮಾಧ್ಯಮದವರು ಕೇಳಿದಾಗ, ಈ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಮ್ಮ ರಾಜ್ಯಕ್ಕೆ ಸಂಬಂಧಿಸಿದ ವಿಚಾರಕ್ಕೆ ಮಾತ್ರ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ.

