ಮಹಾರಾಷ್ಟ್ರ: ಖಾಸಗಿ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ. ಅಹಮದ್ ನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ.
ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಗಾಯಗೊಂಡಿದ್ದಾರೆ. ಐಸಿಯೂ ವಾರ್ಡ್ ನಲ್ಲಿ ಕಾಣಿಸಿಕೊಂಡ ಬೆಂಕಿ ಕೆಲವು ಕಡೆ ಹರಡಿದೆ. ಸದ್ಯ ಬೆಂಕಿಯಿಂದ ಗಾಯಗೊಂಡವರಿಗೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾವು ನೋವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ನಂದಿದ್ದು, ಗಾಯಗೊಂಡವರಿಗರ ಚಿಕಿತ್ಸೆ ಮುಂದುವರೆದಿದೆ.