Maharastra political: 15 ಬಂಡಾಯ ಶಿವಸೇನೆ ಶಾಸಕರಿಗೆ ಕೇಂದ್ರದಿಂದ ವೈ ಪ್ಲಸ್ ಭದ್ರತೆ

ಮುಂಬೈ: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ 15 ಬಂಡಾಯ ಶಿವಸೇನೆ ಶಾಸಕರಿಗೆ ಸಶಸ್ತ್ರ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯ `ವೈ+` ಕೆಟಗರಿ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಪ್ರಕಾಶ್ ಸುರ್ವೆ, ಸದಾನಂದ್ ಸರ್ವಾಂಕರ್, ಯೋಗೇಶ್ ದಾದಾ ಕದಂ, ಪ್ರತಾಪ್ ಸರ್ನಾಯಕ್, ರಮೇಶ್ ಬೋರ್ನಾರೆ, ಮಂಗೇಶ್ ಕುಡಾಲ್ಕರ್, ಸಂಜಯ್ ಶಿರ್ಸಾತ್, ಲತಾಬಾಯಿ ಸೋನಾವಾನೆ, ಯಾಮಿನಿ ಜಾಧವ್ ಸೇರಿದಂತೆ 15 ಶಿವಸೇನಾ ಶಾಸಕರಿಗೆ `ವೈ+~ ವರ್ಗದ ಸಶಸ್ತ್ರ ಸಿಆರ್‌ಪಿಎಫ್ ಸಿಬ್ಬಂದಿ ಭದ್ರತೆ ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. , ಪ್ರದೀಪ್ ಜೈಸ್ವಾಲ್, ಸಂಜಯ್ ರಾಥೋಡ್, ದಾದಾಜಿ ಭೂಸೆ, ದಿಲೀಪ್ ಲಾಂಡೆ, ಬಾಲಾಜಿ ಕಲ್ಯಾಣರ್ ಮತ್ತು ಸಂದೀಪನ್ ಭೂಮಾರೆ. ನಾಯಕರು ಏಕನಾಥ್ ಶಿಂಧೆ ಪಾಳಯಕ್ಕೆ ಸೇರಿಕೊಂಡಿದ್ದಾರೆ.

ಶಿಂಧೆ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ಶಿವಸೇನೆಯ ಬಂಡಾಯ ಶಾಸಕರ ಕುಟುಂಬ ಸದಸ್ಯರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ಆರೋಪಿಸಿದ ಒಂದು ದಿನದ ನಂತರ ಕೇಂದ್ರದಿಂದ ಈ ನಿರ್ಧಾರ ಹೊರಬಿದ್ದಿದೆ.

ಶಿವಸೇನೆಯ ಆಂತರಿಕ ಕಚ್ಚಾಟದಿಂದ ಬಿಜೆಪಿ ಅಧಿಕೃತವಾಗಿ ದೂರ ಉಳಿದಿದ್ದರೂ, ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡಾಯ ನಾಯಕ ಶಿಂಧೆ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಹಿರಂಗವಾಗಿ ಭೇಟಿಯಾಗಿರಬಹುದು ಎಂದು ವರದಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *