Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಾರಾಷ್ಟ್ರದ ಸಾರಿಗೆ ಬಸ್ ಮತ್ತು ನಿರ್ವಾಹಕನಿಗೆ ಮಸಿ : ಚಿತ್ರದುರ್ಗದಲ್ಲಿ 8 ಮಂದಿ ಪೊಲೀಸರ ವಶಕ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 22 : ಮಹಾರಾಷ್ಟ್ರದಲ್ಲಿ ರಾಜ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನ ನಿರ್ವಾಹಕನಿಗೆ ಮರಾಠಿಗರು ಕನ್ನಡದಲ್ಲಿ ಟಿಕೆಟ್ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮರಾಠ ಬಾಷೆ ಗೊತ್ತಿಲ್ಲವೆಂಬ ಕಾರಣಕ್ಕೆ ಅವರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಕನ್ನಡ ಬಾಷೆಗೆ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ( ಫೆಬ್ರವರಿ. 21 ರಂದು ) ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬುರುಜನರೊಪ್ಪದ ಬಳಿ ರಾಜಸ್ಥಾನ ಡಾಬಾದ ಬಳಿ (ಎನ್ ಹೆಚ್ 48) ಬೆಂಗಳೂರುನಿಂದ ಮುಂಬೈ ಗೆ ಹೋಗುತ್ತಿದ್ದ ಮಹರಾಷ್ಟ್ರದ ಸಾರಿಗೆ ಬಸ್ ನ್ನು ತಡೆದು ಬಸ್‌ಗೆ ಕಪ್ಪು ಬಣ್ಣವನ್ನು ಬಳಿದು, ‘ಜೈ ಕರ್ನಾಟಕ, ಜೈ ಕನ್ನಡ, ಬೆಳಗಾವಿ ನಮ್ಮದು, ಮರಾಠಿಗರು ಪುಂಡಾಟಿಕೆ ನಿಲ್ಲಿಸಬೇಕು’ ಎಂದು ಬಸ್‌ ಮೇಲೆ ಬರೆದಿದ್ದರು. ಬಸ್‌ ಚಾಲಕ ಹರಿ ಜಾದವ್‌ ಮುಖಕ್ಕೂ ಮಸಿ ಬಳಿದಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಹರಿ ಜಾದವ್ ಐಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನನ್ವಯ ಶನಿವಾರ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರಾದ ಲಕ್ಷ್ಮೀಕಾಂತ, ತಿಪ್ಪೇಸ್ವಾಮಿ, ಮಣಿಕಂಠ, ರಾಮು, ಇಂದ್ರ, ನಂದಕುಮಾರ್, ಮಂಜುನಾಥ್ ಮತ್ತು ಮಹಮ್ಮದ್ ಅವರನ್ನು ಐಮಂಗಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment