Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅ.07 ರಂದು ಮಹರ್ಷಿ ವಾಲ್ಮೀಕಿ ಜಯಂತಿ : ಪೋಸ್ಟರ್ ಬಿಡುಗಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 30 : ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.7 ರಂದು ಅದ್ದೂರಿಯಾಗಿ ಆಚರಿಸುವ ಸಂಬಂಧ ಜಿಲ್ಲಾ ನಾಯಕ ಸಮಾಜದಿಂದ ವಾಲ್ಮೀಕಿ ಭವನದ ಮುಂಭಾಗ ಮಂಗಳವಾರ ಪೋಸ್ಟರ್‍ಗಳನ್ನು ಬಿಡುಗಡೆಗೊಳಿಸಲಾಯಿತು.

 

ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಅಂದು ಬೆಳಿಗ್ಗೆ ಹತ್ತು ಗಂಟೆಗೆ ಕೋಟೆ ಮುಂಭಾಗದಿಂದ ಮೆರವಣಿಗೆ ಹೊರಟು ವಾಲ್ಮೀಕಿ ಭವನ ತಲುಪಲಿದೆ. ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ನಾಯಕ ಸಮಾಜದವರು ಹಾಗೂ ಸೋದರ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮನವಿ ಮಾಡಿದರು.

ನಗರಸಭೆ ಮಾಜಿ ಸದಸ್ಯ ಎ.ತಿಪ್ಪೇಸ್ವಾಮಿ, ಬಿ.ಮಂಜುನಾಥ, ಸೊಂಡೆಕೊಳ ಶ್ರೀನಿವಾಸ್, ನಿವೃತ್ತ ಪ್ರಾಂಶುಪಾಲರಾದ ಗುಡ್ಡದೇಶ್ವರಪ್ಪ, ಸಿ.ಜಿ.ಶ್ರೀನಿವಾಸ್, ಮಂಜುನಾಥ
ಬಸವರಾಜ ಬಚ್ಚಬೋರನಹಟ್ಟಿ, ನ್ಯಾಯವಾದಿ ಅಶೋಕ್‍ಬೆಳಗಟ್ಟ, ಬೋರೇಶ್, ಸುರೇಶ್ ಗೋನೂರು, ಪ್ರಶಾಂತ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...