ಮಹರ್ಷಿಯ ಚಿಂತನೆಗಳು ಪ್ರತಿಯೊಬ್ಬರಿಗೂ ಆದರ್ಶಪ್ರಾಯ: ಗೋಪಾಲಯ್ಯ

suddionenews
2 Min Read

ಬೆಂಗಳೂರು: ಮಾನವೀಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿಯ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಾಗಪುರದಲ್ಲಿರುವ ಶಾಸಕರ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾಕಾವ್ಯ ರಾಮಾಯಣವನ್ನು ಇಡೀ ಜಗತ್ತಿಗೆ ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರನ್ನು ಆದಿಕವಿ, ಮಹಾಕವಿ ಎಂದು ಕರೆಯುತ್ತಾರೆ. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ ಎಂದು ಬಣ್ಣಿಸಿದರು.

ವಾಲ್ಮೀಕಿ ಮಹರ್ಷಿ ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ಅವರ ಆದರ್ಶ, ಶ್ರದ್ದೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವಂತಾಗಬೇಕು. ಇದರಿಂದ ಪ್ರೀತಿ, ವಿಶ್ವಾಸದಿಂದ ಬದುಕಲು ಸಾಧ್ಯ ಎಂದು ತಿಳಿಸಿದರು.ಇಡೀ ವಿಶ್ವಕ್ಕೆ ರಾಮರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರದ್ದಾಗಿದೆ. ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರವ ವಿದ್ದಲ್ಲಿ ಸಾಧನೆ ಮಾಡಬಹುದು ಎಂಬದನ್ನು ತೋರಿಸಿಕೊಟ್ಟಿದ್ದಾರೆ ಎಂದು ಪ್ರಶಂಸಿದರು.

ಶ್ರೀರಾಮನನ್ನು ಕುರಿತು ಇಡೀ ಬ್ರಹ್ಮಾಂಡವೇ ಮೆಚ್ಚಿಕೊಳ್ಳುವಂತಹ ರಾಮಾಯಣ ಒಂದು ಅದ್ಬುತ ಗ್ರಂಥ. ದೇಶದ ಅನೇಕ ಭಾಷೆಗಳಲ್ಲಿ ರಾಮಾಯಣ ಮಹಾಕಾವ್ಯ ರಚನೆಯಾಯಿತು. ದೇಶ-ವಿದೇಶ ಭಾಷೆಗಳಲ್ಲಿಯೂ ರಚಿಸಲ್ಪಟ್ಟ ಮಹಾ ಗ್ರಂಥವಾಗಿದೆ ಎಂದು ‌ ಹೇಳಿದರು.ವಿಶ್ವಕ್ಕೆರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗೆಯೇ ಮಾನವೀಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ್ದಾರೆ ಎಂದು ತಿಳಿಸಿದರು.

 

ವಾಲ್ಮೀಕಿ ರಾಮಾಯಣ ನಿತ್ಯ ಕಥೆಯಾಗಿದೆಯೇ ಹೊರತು ಮಹಾಕಾವ್ಯವಲ್ಲ, ವಾಲ್ಮೀಕಿ ರಾಮಾಯಣ ಪ್ರತಿನಿತ್ಯ ನಡೆಯುವ ಘಟನೆಗಳಾಗಿವೆ. ಶಾಂತಿ, ಸಹಬಾಳ್ವೆ, ಅಹಿಂಸೆಯನ್ನು ಪ್ರತಿಪಾದಿಸಿದ್ದ ವಾಲ್ಮೀಕಿಯಿಂದ ಪಂಪ, ರನ್ನ, ಪೆÇನ್ನ, ಹರಿಹರ, ರಾಘವಾಂಕ ಮತ್ತಿತರ ಮಹಾನ್ ಕವಿಗಳು ಬೆಳಕಿಗೆ ಬರಲು ಕಾರಣವಾಯಿತು ಎಂದು ಅಭಿಪ್ರಾಯಪಟ್ಟರು.
ವಾಲ್ಮೀಕಿ, ಬುದ್ದ, ಬಸವ, ಕನಕದಾಸ, ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆಗಾಗಿ ಹೋರಾಟ ಮಾಡಿದ್ದಾರೆ. ಆದ್ದರಿಂದ ಇವರನ್ನು ಸದಾ ಸ್ಮರಿಸಬೇಕಿದೆ ಎಂದು ಕರೆ ಕೊಟ್ಟರು.
ನಾಗರಿಕತೆಯ ಬದಲಾವಣೆಗೆ ವಾಲ್ಮೀಕಿಯ ಬದುಕು ಒಂದು ಉತ್ತಮ ನಿದರ್ಶನವಾಗಿದೆ. ವಾಲ್ಮೀಕಿ ಬರೆದ ರಾಮಾಯಣ ಕೃತಿ ಪ್ರಪಂಚದ ಮಹಾನ್ ಗ್ರಂಥವಾಗಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *