ಬೆಂಗಳೂರು: ಮಾನವೀಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿಯ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಾಗಪುರದಲ್ಲಿರುವ ಶಾಸಕರ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾಕಾವ್ಯ ರಾಮಾಯಣವನ್ನು ಇಡೀ ಜಗತ್ತಿಗೆ ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರನ್ನು ಆದಿಕವಿ, ಮಹಾಕವಿ ಎಂದು ಕರೆಯುತ್ತಾರೆ. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ ಎಂದು ಬಣ್ಣಿಸಿದರು.
ವಾಲ್ಮೀಕಿ ಮಹರ್ಷಿ ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ಅವರ ಆದರ್ಶ, ಶ್ರದ್ದೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವಂತಾಗಬೇಕು. ಇದರಿಂದ ಪ್ರೀತಿ, ವಿಶ್ವಾಸದಿಂದ ಬದುಕಲು ಸಾಧ್ಯ ಎಂದು ತಿಳಿಸಿದರು.ಇಡೀ ವಿಶ್ವಕ್ಕೆ ರಾಮರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರದ್ದಾಗಿದೆ. ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರವ ವಿದ್ದಲ್ಲಿ ಸಾಧನೆ ಮಾಡಬಹುದು ಎಂಬದನ್ನು ತೋರಿಸಿಕೊಟ್ಟಿದ್ದಾರೆ ಎಂದು ಪ್ರಶಂಸಿದರು.
ಶ್ರೀರಾಮನನ್ನು ಕುರಿತು ಇಡೀ ಬ್ರಹ್ಮಾಂಡವೇ ಮೆಚ್ಚಿಕೊಳ್ಳುವಂತಹ ರಾಮಾಯಣ ಒಂದು ಅದ್ಬುತ ಗ್ರಂಥ. ದೇಶದ ಅನೇಕ ಭಾಷೆಗಳಲ್ಲಿ ರಾಮಾಯಣ ಮಹಾಕಾವ್ಯ ರಚನೆಯಾಯಿತು. ದೇಶ-ವಿದೇಶ ಭಾಷೆಗಳಲ್ಲಿಯೂ ರಚಿಸಲ್ಪಟ್ಟ ಮಹಾ ಗ್ರಂಥವಾಗಿದೆ ಎಂದು ಹೇಳಿದರು.ವಿಶ್ವಕ್ಕೆರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗೆಯೇ ಮಾನವೀಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ್ದಾರೆ ಎಂದು ತಿಳಿಸಿದರು.
ವಾಲ್ಮೀಕಿ ರಾಮಾಯಣ ನಿತ್ಯ ಕಥೆಯಾಗಿದೆಯೇ ಹೊರತು ಮಹಾಕಾವ್ಯವಲ್ಲ, ವಾಲ್ಮೀಕಿ ರಾಮಾಯಣ ಪ್ರತಿನಿತ್ಯ ನಡೆಯುವ ಘಟನೆಗಳಾಗಿವೆ. ಶಾಂತಿ, ಸಹಬಾಳ್ವೆ, ಅಹಿಂಸೆಯನ್ನು ಪ್ರತಿಪಾದಿಸಿದ್ದ ವಾಲ್ಮೀಕಿಯಿಂದ ಪಂಪ, ರನ್ನ, ಪೆÇನ್ನ, ಹರಿಹರ, ರಾಘವಾಂಕ ಮತ್ತಿತರ ಮಹಾನ್ ಕವಿಗಳು ಬೆಳಕಿಗೆ ಬರಲು ಕಾರಣವಾಯಿತು ಎಂದು ಅಭಿಪ್ರಾಯಪಟ್ಟರು.
ವಾಲ್ಮೀಕಿ, ಬುದ್ದ, ಬಸವ, ಕನಕದಾಸ, ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆಗಾಗಿ ಹೋರಾಟ ಮಾಡಿದ್ದಾರೆ. ಆದ್ದರಿಂದ ಇವರನ್ನು ಸದಾ ಸ್ಮರಿಸಬೇಕಿದೆ ಎಂದು ಕರೆ ಕೊಟ್ಟರು.
ನಾಗರಿಕತೆಯ ಬದಲಾವಣೆಗೆ ವಾಲ್ಮೀಕಿಯ ಬದುಕು ಒಂದು ಉತ್ತಮ ನಿದರ್ಶನವಾಗಿದೆ. ವಾಲ್ಮೀಕಿ ಬರೆದ ರಾಮಾಯಣ ಕೃತಿ ಪ್ರಪಂಚದ ಮಹಾನ್ ಗ್ರಂಥವಾಗಿದೆ ಎಂದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…