Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ.ಬಿ.ಆರ್. ಅಂಬೇಡ್ಕರ್ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Facebook
Twitter
Telegram
WhatsApp

ಚಿತ್ರದುರ್ಗ. ಏ.14:   ಜನಾಂಗ, ಜಾತಿ, ಸಮುದಾಯ ಹಾಗೂ ಅಂತಸ್ತು ಭೇದವಿಲ್ಲದೆ ದೇಶದ ಎಲ್ಲಾ ನಾಗರಿಕರಿಗೂ ಸಂವಿಧಾನದ ಮೂಲಕ ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ.ಬಿ.ಆರ್.ಅಂಬೇಡ್ಕರ್ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ನಗರದ ಜಿ.ಪಂ ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾದ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಜ್ಞಾನದ ಸಂಕೇತ, ಅಂಬೇಡ್ಕರ್ ಎನ್ನುವ ಜ್ಞಾನ ದೀವಿಗೆಯಿಂದ ಬಹಳಷ್ಟು ಜನರ ಜೀವನ ಬೆಳಕು ಕಂಡಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಮುಂದೆ ಸಾಗಬೇಕು. ಪ್ರಜಾಪ್ರಭುತ್ವದ ಮೇಲೆ ಅಪಾರ ನಂಬಿಕೆ ಹೊಂದಿದ್ದ ಅಂಬೇಡ್ಕರ್ ದೇಶದ ಎಲ್ಲ ಅರ್ಹ ವಯಸ್ಸಿನ ನಾಗರೀಕರಿಗೆ ಮತದಾನದ ಹಕ್ಕು ಕಲ್ಪಿಸಿದ್ದಾರೆ.

ಇದರ ಮಹತ್ವ ಅರಿತು ಲೋಕಸಭಾ ಚುನಾವಣೆಗೆ ಬರುವ ಏಪ್ರಿಲ್ 26ರಂದು ನಡೆಯುವ ಮತದಾನದಲ್ಲಿ ಪ್ರತಿಯೊಬ್ಬರು ತಪ್ಪದೇ ಕಡ್ಡಾಯವಾಗಿ ಮತ ಚಲಾಯಿಸಬೇಕು. ಹಾಗೆಯೇ ತಮ್ಮ ಸುತ್ತ ಮುತ್ತಲಿನ ಜನರನ್ನು ಮತದಾನ ಮಾಡಲು ಪ್ರೇರೇಪಿಸಬೇಕು. ಮತದಾನ ಮೂಲಕ ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸಬೇಕು. ಜವಾಬ್ದಾರಿಯುತ ಸರ್ಕಾರನ್ನು ಆಯ್ಕೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕ ಡಾ.ಬಿ.ಎಂ.ಗುರುನಾಥ್ ಮಾತನಾಡಿ, ಬಡವರ ನಿಜವಾದ ಭಾಗ್ಯವಿಧಾತ ಡಾ.ಬಿ.ಆರ್.ಅಂಬೇಡ್ಕರ್. ಇವರು ನಮ್ಮೆಲ್ಲರ ಬದುಕಿನ ಶಾಸನ ಬರೆದು, ಬಡವರ ನಗುವಿನ ಹಿಂದಿರುವ ಶಕ್ತಿಯಾಗಿದ್ದಾರೆ. ಇಂದಿಗೂ ಅನೇಕ ಸಮುದಾಯಗಳು ಜಾತಿ ವ್ಯವಸ್ಥೆಯ ಬೇಗುದಿಯಲ್ಲಿ ಬೆಂದು ನಿಟ್ಟುಸಿರು ಬಿಡುತ್ತಿವೆ. ಅಂಬೇಡ್ಕರ್ ನಂತರ ಅವರಷ್ಟೇ ಕಾಳಜಿಯಿಂದ ದೀನ ದಲಿತರ ಬಗ್ಗೆ ಯೋಚಿಸುವ ನಾಯಕ ದೇಶದಲ್ಲಿ ಹುಟ್ಟಿ ಬಂದಿಲ್ಲ ಎಂದರು.

ಬುದ್ದ, ಬಸವ, ಶಾಹು ಮಹಾರಾಜ್, ಅಂಬೇಡ್ಕರ್, ಪರಿಯಾರ್, ಪುಲೆ, ಕುದ್ಮಲ್ ರಂಗರಾವ್,  ಅವರಂತಹ ಮಹನೀಯರ ಚಿಂತನೆ ಫಲವಾಗಿ ಜಾತಿ ವ್ಯವಸ್ಥೆಯ ಅಸಮಾನತೆ ಪ್ರಮಾಣ ಕಡಿಮೆಯಾಗಿ, ಸಮಾಜದಲ್ಲಿ ಸಮಾನತೆ ಮೂಡುತ್ತಿದೆ. ಡಾ.ಅಂಬೇಡ್ಕರ್ ಜಾತಿ ಎಂಬ ರಾಕ್ಷಸನನ್ನು ಹೊಡೆದ ಹಾಕುವ ಪ್ರಯತ್ನ ಮಾಡಿದರು. ಪೂನಾ ಪ್ಯಾಕ್ಟ್ ಮೂಲಕ ದೇಶದ ದಲಿತರನ್ನು ಶತಮಾನಗಳ ಕೂಪದಿಂದ ವಿಮೋಚನೆಗೊಳಿಸಿದರು.

ಕಲಾರಾಮ್ ಮಂದಿರ ಪ್ರವೇಶ, ಮಹಾಡ್ ಕೆರೆ ಸತ್ಯಾಗ್ರಹ, ದುಂಡು ಮೇಜಿನ ಸಮ್ಮೇಳದಲ್ಲಿ ಭಾಗವಹಿಸುವ ಮೂಲಕ ಅಂಬೇಡ್ಕರ್ ದಲಿತರ ಹಕ್ಕುಗಳಿಗೆ ಸತತವಾಗಿ ಹೋರಾಟ ನಡೆಸಿದರು. ಪುತ್ರ ರಾಜರತ್ನ ಮರಣದ ಶೋಕದ ಸಂದರ್ಭದಲ್ಲಿ ಸಹ ಅಂಬೇಡ್ಕರ್ ದುಂಡು ಮೇಜಿನ ಸಮ್ಮೇಳನದಲ್ಲಿ ಭಾಗವಹಿಸಿ ದೀನ ದಲಿತರ ಪರವಾಗಿ ವಾದ ಮಂಡಿಸಿದರು ಎಂದು ಉಪನ್ಯಾಸಕ  ಡಾ.ಬಿ.ಎಂ.ಗುರುನಾಥ್ ಹೇಳಿದರು.

ದೇಶದಲ್ಲಿ ಸ್ವಾತಂತ್ರಕ್ಕೂ ಮೊದಲು ಬಂಡವಾಳ ಶಾಹಿಗಳು, ಬಿ.ಎ ಹಾಗೂ ಎಂ.ಎ ಪದವಿಧರರು ಹಾಗೂ ತೆರಿಗೆ ಕಟ್ಟುವವರಿಗೆ ಮಾತ್ರ ಮತದಾನ ಹಕ್ಕು ಇತ್ತು. ಇದನ್ನು ಬದಲಾಯಿಸಿ ಸ್ವಾತಂತ್ರ್ಯದ ನಂತರದಲ್ಲಿ 21 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಯಾವುದೇ ಜಾತಿ, ಧರ್ಮ, ಅಂತಸ್ತುಗಳ ಬೇಧವಿಲ್ಲದೆ ಮತದಾನ ಹಕ್ಕನ್ನು ಡಾ.ಬಿ.ಆರ್.ಅಂಬೇಡ್ಕರ್ ಕಲ್ಪಿಸಿದರು. ಮತದ ಮೂಲಕ ಆಯ್ಕೆ ಮಾಡುವ ನಾಯಕ ಹೇಗಿರಬೇಕು ಎಂಬ ಕಲ್ಪನೆಯನ್ನು ಸಹ ನೀಡಿದರು ಎಂದು ಉಪನ್ಯಾಸಕ ಡಾ.ಬಿ.ಎಂ.ಗುರುನಾಥ್ ಹೇಳಿದರು.

ಮುಂದಿನ ವರ್ಷ ಅದ್ಧೂರಿ ಜಯಂತಿ ಆಚರಣೆ: ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಈ ಬಾರಿ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ವರ್ಷ ಅದ್ದೂರಿ ಹಾಗೂ ವಿಜೃಂಭಣೆಯಿಂದ ಅಂಬೇಡ್ಕರ್ ಜಯಂತಿಯನ್ನು ಆಚರಿಸುವ ಭರವಸೆಯನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಚುನಾವಣೆ ಕಾರ್ಯನಿಮಿತ್ತ ವೇದಿಕೆಯಿಂದ ಬೇಗನೆ ನಿರ್ಗಮಿಸಿದರು. ಈ ವೇಳೆ ನೆರೆದವರಿಗೆ ಅಂಬೇಡ್ಕರ್ ಜಯಂತಿಯ ಶುಭಾಶಯ ಕೋರಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸ್ವಾಗತಿಸಿದರು. ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ವಂದನಾರ್ಪಣೆ ಮಾಡಿದರು. ವಿದ್ಯಾರ್ಥಿನಿ ಬಿ.ಜಿ.ಸವಿನಯ ಡಾ.ಅಂಬೇಡ್ಕರ್ ಕುರಿತಾದ ಪ್ರಾರ್ಥನೆ ಗೀತೆ ಹಾಡಿದರು. ಕಾರ್ಯಕ್ರಮದಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಲಾಯಿತು.

 

ಪೆÇಲೀಸ್ ವರಿಷ್ಠಾಧಿಕಾರಿ ಧಮೇರ್ಂದ್ರ ಕುಮಾರ್ ಮೀನಾ, ಜಿ.ಪಂ ಉಪ ಕಾರ್ಯದರ್ಶಿ ತಿಮ್ಮಪ್ಪ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ನಗರಸಭೆ ಆಯುಕ್ತೆ ಎಂ.ರೇಣುಕಾ, ಜಿ.ಪಂ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ: ಅಂಬೇಡ್ಕರ್ ಜಯಂತಿ ಹಿನ್ನಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿನ ಪುತ್ಥಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಲಾರ್ಪಣೆ ಮಾಡಿದರು. ಈ ವೇಳೆ ಪೆÇಲೀಸ್ ವರಿಷ್ಠಾಧಿಕಾರಿ ಧಮೇರ್ಂದ್ರ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ದಲಿತ ಮುಖಂಡರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!