ಚಿತ್ರದುರ್ಗ, ಸುದ್ದಿಒನ್, ಅಕ್ಟೋಬರ್.02 :
ನಾವೆಲ್ಲರೂ ಮಹಾತ್ಮ ಗಾಂಧೀಜಿಯವರ ಶಾಂತಿಯ ಮಾರ್ಗವನ್ನು ಅಳವಡಿಸಿಕೊಂಡು ಅದರಂತೆ ನಡೆಯಬೇಕು ಹಾಗೆ ಮಕ್ಕಳು ಏಕಾಗ್ರತೆಯಿಂದ ಕಲಿಕೆಯಲ್ಲಿ ತೊಡಗಬೇಕೆಂದು ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಕೆ.ಎಂ.ವೀರೇಶ್ ಹೇಳಿದರು.
ನಗರದ ಪಿಳ್ಳೇಕೆರೇನಹಳ್ಳಿಯ ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಿರ್ದೇಶಕ ಕೆ.ಎಂ.ಚೇತನ್ ಮಾತನಾಡಿ, ನಮ್ಮಲ್ಲಿ ಅಸೂಯೆ ಇರಬಾರದು ನಮ್ಮಲ್ಲಿ ಪರಸ್ಪರ ಹೊಂದಾಣಿಕೆ ಇರಬೇಕು. ಮಕ್ಕಳಲ್ಲಿ ಮಾನವೀಯತೆಯ ಮೌಲ್ಯಗಳು ಹಾಗೂ ಸ್ವಚ್ಛತೆಯ ಅರಿವು ಮೂಡಿಸುವಂತಹ ಕೆಲಸ ಶಿಕ್ಷಕರದ್ದು ಎಂದು ಹೇಳಿದರು.
ಹಾಸ್ಯ ಕಲಾವಿದ ಜಗನ್ನಾಥ್ ಮಾತನಾಡಿ, ಗಾಂಧೀಜಿಯವರ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜೀವನದ ಮತ್ತು ಅವರ ಆದರ್ಶಗಳನ್ನು ವಿವರವಾಗಿ ತಿಳಿಸುತ್ತಾ ಕೆಲವು ಹಾಸ್ಯ ಚಟಾಕಿಗಳನ್ನು ಹೇಳಿ ಮಕ್ಕಳನ್ನು ಮತ್ತು ಎಲ್ಲರನ್ನೂ ನಗಿಸಿದರು. ಹಾಗೂ ಈ ಸಂಸ್ಥೆಯ ಎಲ್ಲಾ ಶಿಕ್ಷಕರುಗಳು ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಯಿತು. ಮಕ್ಕಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.