Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಾತ್ಮಾ ಜ್ಯೋತಿಬಾ ಫುಲೆ ಅವರ ಜನ್ಮ ದ್ವಿ ಶತಮಾನೋತ್ಸವ: ಮಕ್ಕಳ ಬೇಸಿಗೆ ಶಿಬಿರ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 28 : ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ವತಿಯಿಂದ ಮುತ್ತಯ್ಯನಹಟ್ಟಿ ಹಾಗೂ ಗಂಜಿಗಟ್ಟೆ ಹಳ್ಳಿಗಳಲ್ಲಿ ಮಕ್ಕಳಲ್ಲಿ ಶಿಕ್ಷಣ – ಸಂಸ್ಕೃತಿ – ಮಾನವಿಯತೆ ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಶಿಬಿರವನ್ನು ಉದ್ದೇಶಿಸಿ ಎಐಡಿಎಸ್‌ಓ ರಾಜ್ಯ ಕಛೇರಿ ಕಾರ್ಯದರ್ಶಿ ಮಹಾಂತೇಶ್ ಬಿಳೂರು ಅವರು ಮಾತನಾಡುತ್ತಾ ಈ ದೇಶದ ಶೋಷಿತರು, ಹೆಣ್ಣು ಮಕ್ಕಳು ಮತ್ತು ಎಲ್ಲಾ ವರ್ಗದ ಜನಗಳ ಶಿಕ್ಷಣಕ್ಕಾಗಿ ಹೋರಾಡಿದ ಮಹಾತ್ಮಾ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ಅವರು ಅಂದು ಜಡ್ಡು ಗಟ್ಟಿದ ಹಳೇ ಗೊಡ್ಡು ಸಂಪ್ರದಾಯದ ವಿರುದ್ಧ ಹೋರಾಡಿದ ಮಹಾನ್ ಚೇತನರು. ದ್ವಿ ಶತಮಾನದ ಹಿಂದೆ ಶಿಕ್ಷಣ ಅಂದರೆ ಮೇಲು ಜಾತಿಯ ಕೆಲವು ಪುರುಷರ ಸ್ವತ್ತಾಗಿತ್ತು. ಅಂತಹ ಸಂದರ್ಭದಲ್ಲಿ ಶಿಕ್ಷಣದ ಕ್ರಾಂತಿ ಆರಂಭಿಸಿದ್ದು ಮಹಾತ್ಮಾ ಜ್ಯೋತಿಬಾ ಫುಲೆ. ಅವರು ಶಿಕ್ಷಣ ಪಡೆದುಕೊಂಡು ಅವರ ಮೊದಲ ಶಿಷ್ಯರು ಅಂದರೆ ‘ಸಾವಿತ್ರಿ ಬಾಯಿ ಫುಲೆ’. ಇಬ್ಬರು ದಂಪತಿಗಳು ಸೇರಿ ಶಿಕ್ಷಣ ಇದ್ದರೆ ಇಡೀ ಸಮಾಜ ಮುಂದುವರೆಯಲು ಸಾಧ್ಯ ಎಂದು ಪುಣೆಯಲ್ಲಿ ಮೊದಲ ಶಾಲೆ ಆರಂಭವಾಗಿತ್ತು. ಆದರೆ ಇದನ್ನು ಸಹಿಸದೆ ಕೆಲ ಸಾಂಪ್ರದಾಯಿಗಳು ಇವರಿಗೆ ಸಾಕಷ್ಟು ತೊಂದರೆಗಳು ಕೊಟ್ಟರು. ಹಾಗೆ ಸಾವಿತ್ರಿ ಬಾಯಿ ಫುಲೆ ಹೆಣ್ಣು ಮಕ್ಕಳು ಶಾಲೆ ಆರಂಭಿಸಿದಾಗ ಸಗಣಿ ನೀರು ಎರಚಿದರು, ಕಲ್ಲಿನಿಂದ ಹೊಡೆದು ಅವಮಾನಿಸಿ, ಅವರನ್ನು ಸಾಯಿಸುವ ಯತ್ನಗಳ ಕೂಡ ನಡೆಸಿದ್ದರು. ಇಷ್ಟೆಲ್ಲಾ ಸಂಕಷ್ಟಗಳನ್ನು ಎದುರಿಸಿ ನಮ್ಮ ದೇಶದ ಶಿಕ್ಷಣಕ್ಕಾಗಿ ಹೋರಾಡಿ, ನಿಮಗೆಲ್ಲರಿಗೂ ಉಚಿತ ಶಿಕ್ಷಣದ ಆಶಯವನ್ನು ತಂದುಕೊಟ್ಟರು.

ಇವತ್ತಿನ ಮಕ್ಕಳನ್ನು ದಾರಿತಪ್ಪಿಸುವ ಕೆಟ್ಟ ವಾತಾವರಣ ನಿರ್ಮಾಣವಾಗಿದೆ, ಇದರಿಂದ ದೂರವಿದ್ದು, ಸಮಾಜದಲ್ಲಿ ಒಳ್ಳೆಯ ವಿದ್ಯಾರ್ಥಿಗಳು ಆಗಬೇಕು. “ಎಲ್ಲಾ ಮಕ್ಕಳು ಕೂಡ ಮಹಾತ್ಮಾ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ಅವರ ಜೀವನ ಚರಿತ್ರೆಯನ್ನು ಅರ್ಥೈಸಿಕೊಂಡು ಜೀವನದಲ್ಲಿ ನೀವು ಕೂಡ ಆದರ್ಶ ವ್ಯಕ್ತಿಗಳಾಗಿ ಬದುಕಬೇಕು” ಎಂದು ಮಕ್ಕಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಸಂಚಾಲಕ ಕೆ ಈರಣ್ಣ ಮತ್ತು ವಿದ್ಯಾರ್ಥಿಗಳು ಅಕ್ಷತಾ, ವಿದ್ಯಾಶ್ರೀ ಇತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now