ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ದಕ್ಷಿಣ ಕನ್ನಡ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮಹೇಶ್ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಬಂಧನದ ಬಳಿಕ ಉಡುಪಿಯ ಬ್ರಹ್ಮಾವರ ಪೊಲೀಸರು ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಮಧ್ಯಾಹ್ನವೇ ಮಹೇಶ್ ತಿಮರೋಡಿ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ತಿಮರೋಡಿ ಅವರನ್ನು ಅರೆಸ್ಟ್ ಮಾಡಿದ ಬಳಿಕ ಮಧ್ಯಾಹ್ನವೆ ಮೆಡಿಕಲ್ ಪರೀಕ್ಷೆ ನಡೆಸಿ ಬ್ರಹ್ಮಾವರ ತಾಲೂಕು ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ಜಾಮೀನು ಅರ್ಜಿಯ ವಿಚಾರಣೆ ಕೂಡ ನಡೆಯಿತು. ವಾದ ಪ್ರತಿವಾದ ಆಲಿಸಿದ್ದ ಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮಹೇಶ್ ಶೆಟ್ಟಿಯ ಜಾಮೀನು ಅರ್ಜಿಯ ವಿಚಾರಣೆ ಆಗಸ್ಟ್ 23ಕ್ಕೆ ನಡೆಯಲಿದೆ. ಈ ಸಂಬಂಧ ಮಹೇಶ್ ತಿಮರೋಡಿ ಅವರ ಪರ ವಕೀಲರು ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ವಿಜಯ ವಾಸು ಪೂಜಾರಿ ಮಾತನಾಡಿ, ತಿಮರೋಡಿಯವರ ಹೇಳಿಕೆಯನ್ನು ಪೊಲೀಸರು ದಾಖಲು ಮಾಡಿದ್ದಾರೆ. ತಿಮರೋಡಿ ಅವರು ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವೈದ್ಯರು ಅವರಿಗೆ ಹೈಬಿಪಿ ಮಾತ್ರೆಯನ್ನು ನೀಡಿದ್ದರು. ಹೈಕೋರ್ಟ್, ಸುಪ್ರೀಂ ಕೋರ್ಟ್ ಆದೇಶ ಕೋರ್ಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಈ ಸೆಕ್ಷನ್ ನಲ್ಲಿ ಏಳು ವರ್ಷದವರೆಗೆ ಮಾತ್ರ ಶಿಕ್ಷೆ ಇದೆ. ಜಾಮೀನು ರಹಿತ ಸೆಕ್ಷನ್ ನಲ್ಲಿ ಕೇಸ್ ದಾಖಲಾಗಿರುವ ಕಾರಣ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ ಎಂದು ವಕೀಲ ವಿಜಯ ವಾಸು ಪೂಜಾರಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್