Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಯಚೂರಿಗೆ ಗಡಿಪಾರು ವಿಚಾರ : ನಿಟ್ಟುಸಿರು ಬಿಟ್ಟ ಮಹೇಶ್ ತಿಮರೋಡಿ

---Advertisement---

ಬೆಂಗಳೂರು: ಸೌಜನ್ಯ ಕೇಸ್ ಹೋರಾಟಗಾರ ಮಹೇಶ್ ತಿಮರೋಡಿಗೆ ಈಗ ಕೊಂಚ ರಿಲ್ಯಾಕ್ಸ್ ಆದಂತೆ ಆಗಿದೆ. ಬೆಳ್ತಂಗಡಿಯಿಂದ ರಾಯಚೂರಿಗೆ ಗಡಿಪಾರು ಮಾಡಿ, ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಹೈಕೋರ್ಟ್ ಗಡಿಪಾರಿಗೆ ಮತ್ತೆ ತಡೆ ನೀಡಿದ್ದು, ಮಹೇಶ್ ತಿಮರೋಡಿಗೆ ಸಮಾಧಾನವಾದಂತಾಗಿದೆ.

ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾವರ್ಗೀಸ್ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ, ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಪೂರ್ಣಗೊಳಿಸಿದ್ದು, ಆದೇಶ ಕಾಯ್ದಿರಿಸಿದೆ. ಆದರೆ ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಬೇಡ. ಗಡಿಪಾರು ಜಾರಿಗೊಳಿಸದಂತೆ ಮಹತ್ವ್ ಸೂಚನೆ ನೀಡಿದೆ. ಇದರೊಂದಿಗೆ ಮಹೇಶ್ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕವಾಗಿ ಗಡಿಪಾರಿನಿಂದ ಪಾರಾದಂತೆ ಆಗಿದೆ.

ಈ ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ಕೇಸ್ ಗಳು ದಾಖಲಾಗಿದ್ದವು. ಅದರಲ್ಲೂ ವಿವಿಧವಾದಂತ ಕೇಸ್ ಗಳು ಅದಾಗಿದ್ದವು. ಹೀಗಾಗಿ ಮಹೇಶ್ ಶೆಟ್ಟಿ‌ತಿಮರೋಡಿಯನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷಗಳ ಕಾಲ ಅವರನ್ನು ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿತ್ತು. ಸೆಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತರಾದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಆದ್ರೆ ಇನ್ನೂ ಕೂಡ ಗಡಿಪಾರು ಪ್ರಕ್ರಿಯೆ ನಡೆದಿಲ್ಲ. ಯಾಕಂದ್ರೆ ಗಡಿಪಾರು ನೋಟೀಸ್ ಅನ್ನು ಪೊಲೀಸರು ಖುದ್ದು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನೀಡಬೇಕಿದೆ. ಆದರೆ ಆ ನೋಟೀಸ್ ಅನ್ನು ತಿಮರೋಡಿಗೆ ಕೊಡುವುದಕ್ಕೆ ಆಗಿರಲಿಲ್ಲ. ಅವರ ಮನೆಗೆ ಅಂಟಿಸಿ ಬಂದಿದ್ದರು. ಈಗ ತಿಮರೋಡಿ ಅವರು ಕಾನೂನು ಮೂಲಕವೇ ಗೆದ್ದಿದ್ದಾರೆ. ಗಡಿಪಾರಿನಿಂದ ಬಚಾವ್ ಆಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...