Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ

---Advertisement---

ಚಿತ್ರದುರ್ಗ. ನ.01: ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‍ಗೆ ರೂ.2250/- ಬೆಲೆಯಲ್ಲಿ ಖರೀದಿಸಲು ಕ್ರಮಕೈಗೊಂಡಿದೆ.

ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ. ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿ ನೀಡಿ, ಪ್ರೂಟ್ಸ್ ತಂತ್ರಾಂಶದಲ್ಲಿ ನೊಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೊಂದಾಯಿಸಿಕೊಳ್ಳಬಹುದಾಗಿದೆ.

ನೊಂದಣೆ ಪ್ರಕ್ರಿಯೆಯು ಈಗಾಗಲೇ ನ.13 ರಿಂದ ಪ್ರಾರಂಭವಾಗಿದ್ದು, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ರೈತರಿಗೆ ಸಾಗಾಣಿಕಾ ವೆಚ್ಚದ ಹೊರೆಯನ್ನು ತಗ್ಗಿಸುವ ಸಲುವಾಗಿ, ಮಹಾಮಂಡಳವು ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದಿರುತ್ತದೆ.

ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರಕಾರದ ಕೃಷಿ ಇಲಾಖೆ ಸಿದ್ಧಪಡಿಸಿರುವ  ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುಷ್ಠಾನಕ್ಕೆ ತರುತ್ತಿದೆ.

ಪ್ರತಿ ಒಬ್ಬ ರೈತರಿಂದ ಗರಿಷ್ಠ 1000 ಕ್ವಿಂಟಾಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ದಾವಣಗೆರೆ ಜಿಲ್ಲೆಗೆ ಸಂಬಂಧಿಸಿದಂತೆ, ಹೆಚ್ಚಿನ ಮಾಹಿತಿಗಾಗಿ ಆಸಕ್ತ ರೈತರು ಡಾ. ಎಸ್.ಎಂ.ಮೂರ್ತಿ, ವ್ಯವಸ್ಥಾಪಕರು (ಶೇಮತಾಂ) -7760980540 ಇವರನ್ನು ಹಾಗೂ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಗೆ ಸಂಬಂಧಪಟ್ಟಂತೆ ಡಾ.ಸಂಜಯ್.ಕೆ.ಪಿ (ಉಪ ವ್ಯವಸ್ಥಾಪಕರು, ಶೇಖರಣೆ) 8971435116 ಇವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ  ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment