Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೆಕ್ಕೆಜೋಳ ಖರೀದಿ: ನೋಂದಣಿ ಅವಧಿ ಫೆ. 13ರವರೆಗೆ ವಿಸ್ತರಣೆ

---Advertisement---

ಚಿತ್ರದುರ್ಗ. ಫೆ.7: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮೆಕ್ಕೆಜೋಳ ಮಾರಾಟ ಮಾಡಲು ರೈತರ ನೋಂದಣಿ ಅವಧಿಯನ್ನು ಇದೇ ಫೆಬ್ರವರಿ 13ರವರೆಗೆ ಹಾಗೂ ಯುಎಂಪಿ ವೇದಿಕೆಯಡಿ ವಹಿವಾಟು ಅಂತ್ಯಗೊಳಿಸುವ ದಿನಾಂಕವನ್ನು ಫೆ.21 ರವರೆಗೆ ಪುನರ್ ನಿಗಧಿಪಡಿಸಿ ಆದೇಶಿಸಿದೆ.

 

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸುವ ಸಂಬಂಧ ಈ ಹಿಂದೆ ಜಿಲ್ಲಾವಾರು ನಿಗದಿಪಡಿಸಲಾಗಿದ್ದ ಮಿತಿಯನ್ನು ಹಿಂಪಡೆಯಲಾಗಿದೆ. ಆಯಾ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆದ ರೈತರುಗಳಿಗೆ ಮೊದಲು ನೋಂದಣಿ ಮಾಡಿಕೊಂಡವರಿಗೆ ಪ್ರಥಮ ಆದ್ಯತೆ ನೀಡುವ ಮೇರೆಗೆ ಮೆಕ್ಕೆಜೋಳ ಉತ್ಪನ್ನದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯನ್ನು ರಾಜ್ಯ ವ್ಯಾಪ್ತಿಗೆ ಗರಿಷ್ಟ ಪ್ರಮಾಣವನ್ನು 40 ಲಕ್ಷ ಕ್ವಿಂಟಾಲ್‍ಗೆ ನಿಗಧಿಪಡಿಸಿ ಆದೇಶಿಸಿದೆ. ಈ ಯೋಜನೆಯಡಿ ರೈತರು ತಮ್ಮ ಉತ್ಪನ್ನವನ್ನು ಮಾರಾಟ ಮಾಡಿ ಬೆಲೆ ವ್ಯತ್ಯಾಸದ ಸೌಲಭ್ಯ ಪಡೆಯುವಂತೆ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...