ಚಿತ್ರದುರ್ಗ. ಫೆ.7: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮೆಕ್ಕೆಜೋಳ ಮಾರಾಟ ಮಾಡಲು ರೈತರ ನೋಂದಣಿ ಅವಧಿಯನ್ನು ಇದೇ ಫೆಬ್ರವರಿ 13ರವರೆಗೆ ಹಾಗೂ ಯುಎಂಪಿ ವೇದಿಕೆಯಡಿ ವಹಿವಾಟು ಅಂತ್ಯಗೊಳಿಸುವ ದಿನಾಂಕವನ್ನು ಫೆ.21 ರವರೆಗೆ ಪುನರ್ ನಿಗಧಿಪಡಿಸಿ ಆದೇಶಿಸಿದೆ.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸುವ ಸಂಬಂಧ ಈ ಹಿಂದೆ ಜಿಲ್ಲಾವಾರು ನಿಗದಿಪಡಿಸಲಾಗಿದ್ದ ಮಿತಿಯನ್ನು ಹಿಂಪಡೆಯಲಾಗಿದೆ. ಆಯಾ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆದ ರೈತರುಗಳಿಗೆ ಮೊದಲು ನೋಂದಣಿ ಮಾಡಿಕೊಂಡವರಿಗೆ ಪ್ರಥಮ ಆದ್ಯತೆ ನೀಡುವ ಮೇರೆಗೆ ಮೆಕ್ಕೆಜೋಳ ಉತ್ಪನ್ನದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯನ್ನು ರಾಜ್ಯ ವ್ಯಾಪ್ತಿಗೆ ಗರಿಷ್ಟ ಪ್ರಮಾಣವನ್ನು 40 ಲಕ್ಷ ಕ್ವಿಂಟಾಲ್‍ಗೆ ನಿಗಧಿಪಡಿಸಿ ಆದೇಶಿಸಿದೆ. ಈ ಯೋಜನೆಯಡಿ ರೈತರು ತಮ್ಮ ಉತ್ಪನ್ನವನ್ನು ಮಾರಾಟ ಮಾಡಿ ಬೆಲೆ ವ್ಯತ್ಯಾಸದ ಸೌಲಭ್ಯ ಪಡೆಯುವಂತೆ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











