Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಗಮ ಮಂಡಳಿಯಲ್ಲಿ ಮೇಜರ್ ಸರ್ಜರಿ

Facebook
Twitter
Telegram
WhatsApp

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮುಗಿಯುತ್ತಿದ್ದಂತೆ ನಿಗಮ ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ಬದಲಾವಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಜರ್ ಸರ್ಜರಿ ಮಾಡಲಿದ್ದಾರೆ.

ಹೈಕಮಾಂಡ್ ಸೂಚನೆಯಂತೆ ಬಿಎಸ್​ವೈ ಬೆಂಬಲಿಗರಿಗೆ ಕೊಕ್ ನೀಡಿ ಹೊಸಬರಿಗೆ ಮಣೆ ಹಾಕಲಿದ್ದಾರೆ ಎನ್ನಲಾಗುತ್ತಿದೆ. ಯಡಿಯೂರಪ್ಪ ಅವಧಿಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ವಿಷಯದಲ್ಲಿ ಹೈಕಮಾಂಡ್ ಈಗ ರಂಗ ಪ್ರವೇಶ ಮಾಡಿದೆ.

ಆಪ್ತರಿಗೆ ಬಿಎಸ್​ವೈ ಮಣೆಹಾಕಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಅವರ ಬದಲಾವಣೆಗೆ ಪಕ್ಷ ಸೂಚನೆ ನೀಡಿದೆ. ಅದಕ್ಕಾಗಿ ಸಮಿತಿಯನ್ನು ರಚನೆ ಮಾಡಿದ್ದು, ಸಮಿತಿಯ ಅಭಿಪ್ರಾಯ ಪಡೆದು ವರದಿ ಪರಿಶೀಲಿಸಿ ಬಸವರಾಜ್ ಬೊಮ್ಮಾಯಿ ಸರ್ಕಾರ ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರ ಬದಲಾವಣೆ ಮಾಡಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ನಿಗಮ-ಮಂಡಳಿಗಳಲ್ಲಿ ಸಂಘ ಪರಿವಾರದ ಹಿನ್ನೆಲೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಸಂಘಟನೆಯಲ್ಲಿ ತೊಡಗಿಕೊಂಡವರಿಗೆ ಮಣೆ ಹಾಕಬೇಕು, ಮುಂಬರಲಿರುವ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ನೇಮಕಾತಿ ಮಾಡಬೇಕು ಎನ್ನುವ ಸಂದೇಶವನ್ನು ಪಕ್ಷದ ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ರವಾನಿಸಿದೆ.

ಹೀಗಾಗಿ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿರುವ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರಿಂದ ರಾಜೀನಾಮೆ ಪಡೆದು ಹೊಸದಾಗಿ ನೇಮಕಾತಿ ಮಾಡಲು ಸಿಎಂ ಮುಂದಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

error: Content is protected !!