Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂಬರುವ ತಾ. ಪಂ., ಜಿ. ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ : ಸಚಿವ ಸಂತೋಷ ಲಾಡ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜು. 12 : ಮುಂಬರುವ ತಾಲ್ಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿ ಅಧಿಕಾರವನ್ನು ಹಿಡಿಯಬೇಕಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ಕಾರ್ಯದಲ್ಲಿ ಮುಂದಾಗಬೇಕಿದೆ ಎಂದು ಪಕ್ಷದ ಕಾರ್ಯಕರ್ತರಿಗೆ ಮುಖಂಡರಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಕರೆ ನೀಡಿದರು.

ನಗರಕ್ಕೆ ಭೇಟಿ ನೀಡಿದ್ದ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಿಮ್ಮಲ್ಲರ ಪರಿಶ್ರಮದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಅದೇ ರೀತಿ ಚುನಾವಣೆಯ ಸಮಯದಲ್ಲಿ ಪಕ್ಷ ಮತದಾರರಿಗೆ ನೀಡಿದ ಭರವಸೆಯಂತೆ ಪಂಚ ಗ್ಯಾರೆಂಟಿಗಳನ್ನು ಈಡೇರಿಸಿದೆ. ಇದು ನಮ್ಮ ಸರ್ಕಾರ ಇರುವವರೆಗೂ ಸಹಾ ಮುಂದುವರೆಯಲಿದೆ. ಜಿಲ್ಲೆಯಲ್ಲಿ ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಆರು ಸ್ಥಾನದಲ್ಲಿ  5 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮುಂದಿನ ಚುನಾವಣೆಯಲ್ಲಿ ಆರಕ್ಕೆ ಆರು ಸ್ಥಾನವನ್ನು ಸಹಾ ಗೆಲ್ಲಬೇಕಿದೆ. ಇದರ ಬಗ್ಗೆ ಈಗಿನಿಂದಲೇ ಪಕ್ಷದ ಮುಖಂಡರು ಕಾರ್ಯಕರ್ತರು ಸಜ್ಜಾಗಬೇಕಿದೆ ಎಂದರು.

ಮಾಜಿ ಸಚಿವರಾದ ಅಂಜನೇಯರವರು ಸಹಾ ನಮ್ಮ ಜೊತೆಯಲ್ಲಿ ವಿಧಾನಸಭೆಯಲ್ಲಿ ಇರಬೇಕಿತ್ತು. ಆದರೆ ಅವರು ಸೋತ್ತಿದ್ದಾರೆ. ಆದರೂ ಸಹಾ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡಿದ್ದಾರೆ. ರಾಜ್ಯ ಸಚಿವರು ಯಾವುದೇ ಜಿಲ್ಲಾ ಪ್ರವಾಸವನ್ನು ಮಾಡುವಾಗ ಅಲ್ಲಿನ ಜಿಲ್ಲಾ ಕಚೇರಿಗೆ ಹೋಗುವುದು ಪದ್ದತಿಯಾಗಿದೆ ಇದೇ ರೀತಿ ಚಿತ್ರದುರ್ಗ ಜಿಲ್ಲೆಗೆ ಬಂದ ನಾನು ಜಿಲ್ಲಾ ಕಚೇರಿಗೆ ಭೇಟಿ ನೀಡುವುದರ ಮೂಲಕ ನಿಮ್ಮನ್ನು ಬೇಟಿ ಮಾಡುವ ಸೌಭಾಗ್ಯ ಸಿಕ್ಕಿದೆ ಎಂದ ಅವರು, ಇದು ನನ್ನ ತುರ್ತು ಭೇಟಿಯಾಗಿದೆ ಇದರ ಬದಲು ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೋಮ್ಮೆ ಸಭೆಯನ್ನು ಕರೆದು ಅಲ್ಲಿಗೆ ನಾನು ಹಾಗೂ ನನ್ನ ಅಧಿಕಾರಿಗಳು ಬಂದು ನಿಮ್ಮ ಸಮಸ್ಯೆ ಏನೇ ಇದ್ದರೂ ಸಹಾ ಬಗೆಹರಿಸಲಾಗುವುದು ಎಂದು ಭರವಸೆಯನ್ನು ನೀಡಿದರು.
ಈ ಸಭೆಯಲ್ಲಿ ನಮ್ಮ ಸರ್ಕಾರದ ಸಾಧನೆ ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ತಿಳಿಸಲಾಗುವುದು. ಬೇರೆ ರಾಜ್ಯಗಳಿಗೆ ನಮ್ಮ ರಾಜ್ಯದಲ್ಲಿ ಸಿಗುವಂತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಕಾಂಗ್ರೆಸ್‍ಗೆ ತನ್ನದೆ ಆದ ಇತಿಹಾಸ ಇದೆ. ನಾವೆಲ್ಲರೂ ಕಾಂಗ್ರೆಸ್ ಪಕ್ಷದಲ್ಲಿ ಇರುವವರಾಗಿದ್ದಾರೆ. ನಮ್ಮ ಮೇಲೆ ಜವಾಬ್ದಾರಿ ಇದೆ. ರಾಜ್ಯದಲ್ಲಿ ಬಿಜೆಪಿಯವರು ಬಹಳ ಸುಳ್ಳುನ್ನು ಹೇಳುತ್ತಿದ್ದಾರೆ. ಅದಕ್ಕಾಗಿ ನಾನಾ ರೀತಿಯ ಮಾರ್ಗವನ್ನು ಅವಲಂಬಿಸುತ್ತಿದ್ದಾರೆ. ಜನತೆಯೂ ಸಹಾ ಅದನ್ನೇ ನಂಬುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸತ್ಯವನ್ನು ತಿಳಿದು ಅದನ್ನು ಜನರಿಗೆ ತಿಳಿಸುವಂತ ಕಾರ್ಯವನ್ನು ಮಾಡಬೇಕಿದೆ. ಮುಂಬರುವ ತಾಲ್ಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿ ಅಧಿಕಾರವನ್ನು ಹಿಡಿಯಬೇಕಿದೆ ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ಕಾರ್ಯದಲ್ಲಿ ಮುಂದಾಗಬೇಕಿದೆ ಎಂದು ಸಚಿವ ಸಂತೋಷ ಲಾಡ್ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಚಿವರಾದ ಹೆಚ್.ಅಂಜನೇಯ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರವರ ಜೋಡಿ ನಾಯಕತ್ವದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಸರ್ಕಾರವನ್ನು ರಚನೆ ಮಾಡಲಾಗಿದೆ. ಗ್ಯಾರೆಂಟಿಯನ್ನು ಸಹಾ ಜಾರಿ ಮಾಡಿದೆ ಜನರ ಸರ್ವತೋಮುಖ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ಇದರಿಂದ ಬಡತನ ನಿರ್ಮೂಲನೆಯಾಗಿದೆ, ಶ್ರೀಮತಿ ಇಂದಿರಾಗಾಂಧಿಯವರು ಜಾರಿ ಮಾಡಿದ ಗರೀಭಿ ಹಠಾವೂ ಕಾರ್ಯಕ್ರಮದ ಮುಂದಿನ ಭಾಗವಾಗಿ ಸಿದ್ದರಾಮಯ್ಯ ಅನ್ನಭಾಗ್ಯವನ್ನು ಜಾರಿ ಮಾಡಿ ಯಾರೂ ಸಹಾ ಹಸಿವಿನಿಂದ ಇರಬಾರದೆಂದು ಮಾಡಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಪಂಚ ಗ್ಯಾರೆಂಟಿಗಳಿಂದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಉಚಿತವಾದ ಪ್ರಯಾಣ, ವಿದ್ಯುತ್, ಗೃಹ ಲಕ್ಷ್ಮೀ, ನಿರುದ್ಯೋಗ ಭತ್ಯೆ, ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ. ಈ ಪಂಚ ಗ್ಯಾರೆಂಟಿಯಿಂದ ಬಿಜೆಪಿಯವರು ಅಭೀವೃದ್ದಿಯಾಗಿಲ್ಲ ಎಂದು ಬೊಬ್ಬೆ  ಹೊಡಿಯುತ್ತಿದ್ದಾರೆ, ಆದರೆ ಸಿದ್ದರಾಮಯ್ಯ ರವರು ಅರ್ಥಿಕ ತಜ್ಞರಾಗಿ ಗ್ಯಾರೆಂಟಿಯ ಜೊತೆಗೆ ಅಭೀವೃದ್ದಿಯನ್ನು ಸಹಾ ಮಾಡಿದ್ದಾರೆ. ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಕಾರ್ಮಿಕ ಮಂತ್ರಿಗಳಾಗಿ ಉತ್ತಮವಾಧ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ. ಕಟ್ಟಡ ಕಾರ್ಮಿಕರು ಕೆಲಸದಲ್ಲಿ ಕಡಿಮೆ ಸಮಯವನ್ನು ಮಾತ್ರ ವ್ಯಯ ಮಾಡುತ್ತಿದ್ದಾರೆ, ಆದರೆ ಕಟ್ಟಡ ಕಾರ್ಮಿಕರಿಗೆ 8 ಗಂಟೆಗ ಕಡ್ಡಾಯವಾಗಿ ಕೆಲಸ ಮಾಡುವಂತೆ ಆಗಬೇಕಿದೆ ಇಂತಹರಿಗೆ ಮಾತ್ರ ಸರ್ಕಾರದ ಸೌಲಭ್ಯ ಸಿಗುವಂತೆಯಾಗಬೇಕಿದೆ ಎಂದ ಅವರು ಮೋದಿಯವರು 12 ಗಂಟೆ ಕೆಲಸವನ್ನು ಮಾಡುವಂತೆ ಹೇಳಿದ್ದಾರೆ ಆದರೆ ಇದಕ್ಕೆ ನಮ್ಮ ವಿರೋಧ ಇದೆ ಎಂದು ಅಂಜನೇಯ ತಿಳಿಸಿದರು.

ಕಾರ್ಯಕ್ರಮದಲ್ಲಿ ಡಿಸಿಸಿ ಅಧ್ಯಕ್ಷ ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಗ್ಯಾರೆಂಟಿ ಜಿಲ್ಲಾಧ್ಯಕ್ಷ ಶಿವಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಶ್ರೀಮತಿ ಜಯಮ್ಮ, ಬ್ಲಾಕ್ ಅಧ್ಯಕ್ಷ ಲಕ್ಷ್ಮೀಕಾಂತ್, ಜೆಜೆಹಟ್ಟಿ ತಿಪ್ಪೇಸ್ವಾಮಿ, ಓ.ಶಂಕರ್, ಅಂಜನಪ್ಪ ಜಾಕಿರ್ ಹುಸೇನ್, ಖಾಸಿಂಆಲಿ, ಯೋಗೀಶ್ ಬಾಬು, ಪ್ರಕಾಶ್ ಶಿವಲಿಂಗಪ್ಪ, ಮಂಜುನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment