ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಜೂ. 08 : ಮಾದಿಗರ ಗಟ್ಟಿದ್ವನಿ ಒಳ ಮೀಸಲಾತಿ ಜಾರಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುವ ಹೆಚ್. ಆಂಜನೇಯ ರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ನಾಯಕರನ್ನು ಜಿ.ಪಂ. ಮಾಜಿ ಸದಸ್ಯರು ಮಾದಿಗ ಸಮುದಾಯದ ಮುಖಂಡರಾದ ನರಸಿಂಹರಾಜು ಆಗ್ರಹಿಸಿದ್ದಾರೆ.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಹೊರಗಡೆ ಮಾದಿಗ ಸಮುದಾಯಕ್ಕೆ ಬೆಂಬಲವಾಗಿ ನಿಲ್ಲುವಂತಹ ಆಂಜನೇಯರವರು ವಿಧಾನಸೌಧದ ಒಳಗಡೆಗೂ ಸಹ ನಮ್ಮ ಸಮುದಾಯದ ಪರವಾಗಿ ಧ್ವನಿ ಎತ್ತುವ ಕಾರ್ಯವನ್ನು ಸಚಿವರಾಗಿ ಮಾಡುತ್ತಾರೆ. ಇದಲ್ಲದೇ ರಾಜ್ಯದಲ್ಲಿ ಮಾದಿಗ ಸಮುದಾಯ ಸುಮಾರು ಒಂದು ಕೋಟಿಯಷ್ಟಿದೆ.. ಈ ಹಿನ್ನೆಲೆಯಲ್ಲಿ ನಮ್ಮ ಸಮುದಾಯಕ್ಕೆ 3 ರಿಂದ 4 ಸಚಿವ ಸ್ಥಾನವನ್ನು ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಆಂಜನೇಯರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿ ಮಾಡಬೇಕು ಇದರಿಂದ ಮಾದಿಗ ಸಮುದಾಯಕ್ಕೆ ಬಲಬಂದಾಗುತ್ತದೆ ಎಂದು ತಿಳಿಸಿದರು.
ಮಾದಿಗ ಜನಾಂಗದಲ್ಲಿ ಧ್ರುವತಾರೆಯಾಗಿ ಜನಾಂಗ ಮತ್ತು ಸರ್ಕಾರಕ್ಕೆ ಕೊಂಡಿಯಾಗಿ ಕೆಲಸ ಮಾಡುತ್ತಾ ಸಿದ್ದರಾಮಯ್ಯ ಸರ್ಕಾರದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುವ ಹೆಚ್. ಆಂಜನೇಯರವರು 2023ರಚುನಾವಣೆಯಲ್ಲಿ ನಮ್ಮ ಪಕ್ಷದ ಕೆಲವರಿಂದ ಸೋಲನ್ನು ಅನುಭವಿಸ ಬೇಕಾಯಿತು.ಅವರು ಜೀವನವಿಡಿ ಕಾಂಗ್ರೆಸ್ ಪಕ್ಷಕ್ಕೆ ದುಡಿಯುತ್ತಾ ಬಂದಿದ್ದಾರೆ.2013-18 ರವರೆಗೆ ಸಮಾಜ ಕಲ್ಯಾಣ ಸಚಿವರಾಗುವ ಮೂಲಕ ಉತ್ತಮ ಕೆಲಸವನ್ನು ಮಾಡಿದ್ದಾರೆ.ಎಲ್ಲಾ ಸಮುದಾಯದ ಶಾಲಾ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಿದ್ದಾರೆ.
ಇದರಿಂದ ಮಕ್ಕಳು ನೆಮ್ಮದಿಯಾಗಿ ಶಿಕ್ಷಣವನ್ನು ಪಡೆಯುವಂತಾಗಿದೆ. ಎಂದ ಅವರು, ಈ ಹಿಂದೆ ರಾಜಕೀಯದಲ್ಲಿ ಮಲ್ಲಿಕಾರ್ಜುನ ಖರ್ಗೆ, ಆರ್. ಬಿ ತಿಮ್ಮಾಪುರ ಹಾಗೂ ಡಾ.ಜಿ ಪರಮೇಶ್ವರ್ ರವರು ಚುನಾವಣೆಯಲ್ಲಿ ಸೋತಿದ್ದರು ಸಹ ಇವರಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿದರು.ಹಾಗೆಯೇ ಡಾ.ಜಿ ಪರಮೇಶ್ವರ್ ಹಾಗೂ ಆರ್.ಬಿ ತಿಮ್ಮಾಪುರರವರು ಚುನಾವಣೆಯಲ್ಲಿ ಸೋತಿದ್ದರು ಸಹ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿ ಮಾಡಿದ ಉದಾಹರಣೆಗಳಿವೆ. ಇದೇ ರೀತಿ ಈ ಬಾರಿ ಮಾಜಿ ಸಚಿವರಾದ ಹೆಚ್.ಅಂಜನೇಯರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿ ಮಾಡಬೇಕಿದೆ ಇದರ ಬಗ್ಗೆ ರಾಜ್ಯದ ಪಕ್ಷದ ಮುಖಂಡರಾದ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯರವರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆರವರ ಮನವೊಲಿಸುವ ಕಾರ್ಯವನ್ನು ಮಾಡಬೇಕಿದೆ ಕಾಂಗ್ರೆಸ್ ಪಕ್ಷ ಒಂದು ವೇಳೆ ಅಂಜನೇಯರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಸಚಿವರನ್ನಾಗಿ ಮಾಡದೇ ಇದ್ದರೆ ಅದರ ಪರಿಣಾಮವನ್ನು ಮುಂದೆ ಬರುವ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷ ಎದುರಿಸಲಿದೆ ಎಂದು ನರಸಿಂಹರಾಜು ಎಚ್ಚರಿಸಿದರು.
ಗೋಷ್ಟಿಯಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥ, ಸಿದ್ದರಾಮಪ್ಪ, ರಘು, ಉಮೇಶ್, ಕೋಟಿ, ತಿಪ್ಪೇಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















