Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಐ.ಆರ್ ಪ್ರಕ್ರಿಯೆ ಯಶಸ್ವಿಗೂಳಿಸಿ : ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ ಜೂ. 14 : ಎಸ್.ಐ.ಆರ್ ಅನ್ನು ಕಾಂಗ್ರೆಸ್ ವಿರೋಧ ಮಾಡುತ್ತಿದೆ. ಇದೇ ರೀತಿ ಈ ಹಿಂದೆ ಕಾಂಗ್ರೆಸ್ ಪಕ್ಷ ಮತ ಯಂತ್ರಗಳ ಬಗ್ಗೆಯೂ ಸಹಾ ವಿರೋಧವನ್ನು ವ್ಯಕ್ತಪಡಿಸಿತ್ತು, ಆದರೆ ಇದು ಸಂವಿಧಾನಾತ್ಮಕವಾಗಿ ಚುನಾವಣಾ ಆಯೋಗ ಮಾಡುವಂತ ಕಾರ್ಯ ಇದಾಗಿದೆ. ಚುನಾವಣಾ ಆಯೋಗಕ್ಕೆ ಸಹಕಾರವನ್ನು ನೀಡುವುದರ ಮೂಲಕ ಈ ಕಾರ್ಯವನ್ನು ಯಶಸ್ವಿಗೂಳಿಸಬೇಕಿದೆ ಎಂದು ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಬಿಎಲ್‍ಎ 2ಗಳಿಗೆ ಕರೆ ನೀಡಿದರು.

ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ, ನಗರಮಂಡಲ ಹಾಗೂ ಗ್ರಾಮಾಂತರ ಮಂಡಲದವತಿಯಿಂದ ನಗರದ ಜಗಳೂರು ಮಹಾಲಿಂಗಪ್ಪ ಟವರ್ಸ್‍ನಲ್ಲಿ ಹಮ್ಮಿಕೊಂಡಿದ್ದು  ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ, ಮಹಾಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರ ಪ್ರಮುಖರ ಮತ್ತು ಬಿಎಲ್‍ಎ_ 2ಗಳ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಹಲವಾರು ರಾಜ್ಯಗಳಲ್ಲಿ ಈ ಎಸ್.ಐ.ಆರ್. ಕಾರ್ಯ ನಡೆದಿದೆ ಇದರಲ್ಲಿ ನಮ್ಮ ದೇಶದ ಮತದಾರರಲ್ಲದ ಲಕ್ಷಾಂತರ ಜನತೆಯ ಮತವನ್ನು ರದ್ದು ಮಾಡಲಾಗಿದೆ, ಈಗ ನಮ್ಮ ರಾಜ್ಯದಲ್ಲಿ ಈ ಕಾರ್ಯ ಪ್ರಾರಂಭವಾಗಿದೆ. ನಮ್ಮ ಪಕ್ಷದವರು ಬೂತ್‍ಗಳಲ್ಲಿ  ನಿಮ್ಮ ಮನೆಯ ಸುತ್ತಾ-ಮುತ್ತಲ್ಲಿನ ಜನತೆ ಮತಗಳು ಇವೆಯೇ ಎಂಬುದನ್ನು ಪರಿಶೀಲನೆಯನ್ನು ಮಾಡುವುದರ ಮೂಲಕ ಚುನಾವಣಾ ಆಯೋಗದ ಅಧಿಕಾರಿಗಳು ಸಹಾಯವನ್ನು ಮಾಡಬೇಕಿದೆ ಎಂದ ಅವರು ಕಾಂಗ್ರೆಸ್ ಪಕ್ಷದವರು ಎಸ್.ಐ.ಆರ್.ನ್ನು ವಿರೋಧಿಸುತ್ತಿದೆ ಇದು ಬಿಜೆಪಿ ಮುಂದಿನ ಚುನಾವಣೆಯಲ್ಲಿ ಗೆಲುವಿಗಾಗಿ ಮಾಡುತ್ತಿರುವ ಕುತಂತ್ರ ಎಂದು ಬೊಬ್ಬೆಯನ್ನು ಹೊಡೆಯುತ್ತಿದೆ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡು ಬೂತ್‍ಗಳಲ್ಲಿನ ಮತದಾರರಿಗೆ ನಿಜವನ್ನು ತಿಳಿಸುವಂತ ಕಾರ್ಯವನ್ನು ಮಾಡಬೇಕಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಮಾತನಾಡಿ, ಎಸ್.ಐ.ಆರ್ ಎನ್ನುವುದು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಮಾಡುವಂತ ಕಾರ್ಯವಲ್ಲ ಅದು ಚುನಾವಣಾ ಆಯೋಗ ಮಾಡುವಂತ ಕಾರ್ಯವಾಗಿದೆ, ಇದರಲ್ಲಿ ಯಾರೂ ಸಹಾ ಕೈ ಹಾಕಲು ಬರುವುದಿಲ್ಲ ಚುನಾವಣಾ ಆಯೋಗ ಪೂರ್ಣವಾಗಿ ನಿರ್ವಹಣೆಯನ್ನು ಮಾಡುತ್ತಿದೆ, ಇದರಲ್ಲಿ ನಮ್ಮ ವಾರ್ಡನ ಮತದಾರರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಿ ಕೆಲಸ ಮಾಡುವುದು ನಮ್ಮ ಕೆಲಸವಾಗಿದೆ. ದೇಶದಲ್ಲಿ ಹಲವಾರು ರಾಜ್ಯಗಳಲ್ಲಿ ಈ ಪ್ರಕ್ರಯೇ ನಡೆದಿದೆ, ಇದೇ ರೀತಿ ನಮ್ಮ ರಾಜ್ಯದಲ್ಲಿಯೂ ಸಹಾ ಮುಂದಿನ ದಿನದಲ್ಲಿ ಪ್ರಾರಂಭವಾಗ ಲಿದೆ.ಇದಕ್ಕೆ ನಮ್ಮ ಪಕ್ಷದ ಕಡೆಯಿಂದ ಎಲ್ಲಾ ರೀತಿಯಾದ ಸಹಕಾರವನ್ನು ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಡಾ.ಸಿದ್ದಾರ್ಥ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಸುರೇಶ್ ಸಿದ್ದಾಪುರ ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಸಹಾ ವಕ್ತಾರ ನವೀನ್ ಚಾಲುಕ್ಯ, ನಗರಾಧ್ಯಕ್ಷ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ನಾಗರಾಜ್ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now