Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎನ್‍ಡಿಎ ಮೈತ್ರಿ ಕೂಟದ ಅಭ್ಯರ್ಥಿಯನ್ನು ಬಹುಮತಗಳಿಂದ ಗೆಲ್ಲಿಸಿ : ಶಾಸಕ ಡಾ.ಎಂ.ಚಂದ್ರಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಮೊಳಕಾಲ್ಮುರು, ಅಕ್ಟೋಬರ್. 19 : ಸಾಮಾಜಿಕ ಪ್ರಜ್ಞೆಯುಳ್ಳ ಸಾರ್ವಜನಿಕರ ಬದುಕನ್ನು ಅರ್ಥ ಮಾಡಿಕೊಂಡಿರುವ ಎನ್‍ಡಿಎ. ಮೈತ್ರಿ ಕೂಟದ ಅಭ್ಯರ್ಥಿ ಕೆ.ಎಂ.ಸುರೇಶ್‍ರವರನ್ನು ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಹುಮತಗಳಿಂದ ಗೆಲ್ಲಿಸುವಂತೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಪದವೀಧರ ಮತದಾರರಲ್ಲಿ ವಿನಂತಿಸಿದರು.

ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅ.23 ರಂದು ನಡೆಯಲಿರುವ ಚುನಾವಣೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಂ.ಸುರೇಶ್ ಅತ್ಯಂತ ಪ್ರಾಮಾಣಿಕ
ಜನಾನುರಾಗಿ, ಸಜ್ಜನ. ಪ್ರಜ್ಞಾವಂತ ಪದವೀಧರ ಮತದಾರರು, ಶಿಕ್ಷಕರು, ಉಪನ್ಯಾಸಕರು, ವಕೀಲರು, ವೈದ್ಯರು ನಮ್ಮ ಪಕ್ಷದ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ. ಇಲ್ಲಿಯವರೆಗೂ ನಡೆದಿರುವ ಹತ್ತು ಚುನಾವಣೆಯಲ್ಲಿ ಬಿಜೆಪಿ. ಎಂಟು ಬಾರಿ ಗೆದ್ದಿದೆ. ಜೆಡಿಎಸ್. ಎರಡು ಚುನಾವಣೆಯಲ್ಲಿ ಜಯಶಾಲಿಯಾಗಿದೆ. ಕಾಂಗ್ರೆಸ್ ಒಮ್ಮೆಯೂ ಗೆದ್ದಿಲ್ಲ. ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ಕೆ.ಎಂ.ಸುರೇಶ್‍ರವರ ಗೆಲುವು ನಿಶ್ಚಿತ ಎಂದು ಹೇಳಿದರು.

ಮುಖ್ಯಮಂತ್ರಿಯಾಗಿ ದೇಶದ ಪ್ರಧಾನಿಯಾಗಿ ಮೂರನೆ ಬಾರಿಗೆ ಅಧಿಕಾರ ಹಿಡಿದಿರುವ ನರೇಂದ್ರಮೋದಿರವರು ಪ್ರಪಂಚದಲ್ಲಿಯೇ ಅತ್ಯುತ್ತಮ ಹೆಸರು ಗಳಿಸಿದ್ದಾರೆ. ಇಂತಹ ಪ್ರಧಾನಿ ನಮ್ಮ ದೇಶಕ್ಕೆ ಸಿಕ್ಕಿರುವುದು ಜನತೆಯ ಪುಣ್ಯ. ರಾಜ್ಯದಲ್ಲಿ ಮೂರುವರೆ ವರ್ಷಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್‍ನಿಂದ ಯಾವುದೇ ಅಭಿವೃದ್ದಿಯಾಗಿಲ್ಲ. ಬಿಜೆಪಿ-ಜೆಡಿಎಸ್. ಪಕ್ಷ ಒಂದಾಗಿ ಕೆ.ಎಂ.ಸುರೇಶ್‍ರವರನ್ನು ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಪ್ರಬುದ್ದ ಮತದಾರರನ್ನು ಬೂತ್‍ಗೆ ಕರೆತಂದು ಮತ ಹಾಕಿಸುವ ಹೊಣೆಗಾರಿಕೆ ಕಾರ್ಯಕರ್ತ ಮೇಲಿದೆ.

ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ಕೊಟ್ಟಿದ್ದರು. ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿದ್ದ ಮನಮೋಹನ್‍ಸಿಂಗ್‍ರವರಿಂದ ಪಾರ್ಲಿಮೆಂಟ್ ಚುನಾವಣೆಯಲ್ಲಿ 25 ಸೀಟುಗಳನ್ನು ಗೆಲ್ಲಲು ಆಗಲಿಲ್ಲ. ಒಟ್ಟಾರೆ ಈ ಬಾರಿಯ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ಕೆ.ಎಂ.ಸುರೇಶ್‍ರವರಿಗೆ ಹೆಚ್ಚಿನ ಮತಗಳನ್ನು ನೀಡಿ ಜಯಶಾಲಿಯನ್ನಾಗಿಸುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಪದವೀಧರ ಮತದಾರರಲ್ಲಿ ಮನವಿ ಮಾಡಿದರು.

ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ, ಬಿಜೆಪಿ. ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್‍ಯಾದವ್, ಮಂಜುನಾಥ, ಮಂಡಲ ಅಧ್ಯಕ್ಷರಾದ
ಕೆ.ಟಿ.ರಾಮರೆಡ್ಡಿ, ಆರ್.ರಾಮರೆಡ್ಡಿ, ಬಸವರಾಜಪ್ಪ, ರಾಮರೆಡ್ಡಿ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪದವೀಧರ ಮತದಾರರು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now