Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ : ಮೂರು ದಿನಗಳ ಉಚಿತ ತರಬೇತಿ ಕಾರ್ಯಗಾರ

---Advertisement---

ಚಿತ್ರದುರ್ಗ. ಸೆ.16: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಶಿವಮೊಗ್ಗ ನವುಲೆಯ ಅಡಿಕೆ ಸಂಶೋಧನಾ ಕೇಂದ್ರ ಸಹಯೋಗದಲ್ಲಿ ಇದೇ ಸೆ.19 ರಿಂದ 21 ರವರೆಗೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ “ಅಡಿಕೆ ಬೆಳೆಯ ಸುಧಾರಿತ ಬೇಸಾಯ ತಾಂತ್ರಿಕತೆ, ಅಡಿಕೆಯಲ್ಲಿ ಅಂತರ ಬೆಳೆಗಳ ಮಹತ್ವ ಮತ್ತು ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ” ಕುರಿತು ಮೂರು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಗಾರದ ಮೊದಲನೇ ದಿನ ಸೆ.19ರಂದು ಬೆಳಗ್ಗೆ 10 ಗಂಟೆಗೆ ಡಾ. ನಾಗರಾಜಪ್ಪ ಅಡಿವಪ್ಪರ್, ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ, ಶಿವಮೊಗ್ಗ, ಡಾ. ಸುದೀಪ್, ತೋಟಗಾರಿಕೆ ತಜ್ಞರು, ಡಾ. ಸ್ವಾತಿ, ಕೀಟಶಾಸ್ತ್ರ ತಜ್ಞರು ಮತ್ತು ಡಾ. ಕಿರಣ್, ರೋಗಶಾಸ್ತ್ರಜ್ಞರು ಅವರು ಅಡಿಕೆ ಬೆಳೆಯಲ್ಲಿ ತಳಿಗಳ ಆಯ್ಕೆ, ಬೇಸಾಯ ಕ್ರಮ, ಪೋಷಕಾಂಶಗಳ ನಿರ್ವಹಣೆ, ರೋಗ ಕೀಟಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮತ್ತು ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆಯ ಕುರಿತು ಪ್ರಾತ್ಯಕ್ಷಿಕೆ ಮಾಡಲಿದ್ದಾರೆ.

ಎರಡನೇ ದಿನ ಸೆ.20ರಂದು ಬೆಳಗ್ಗೆ 6 ಗಂಟೆಗೆ ತುಮಕೂರಿನ ಬೆಳ್ಳಾವಿ ಕ್ರಾಸ್ ಹತ್ತಿರದ ಕುರಿಕೆಂಪನಹಳ್ಳಿ ಗ್ರಾಮದ ಅಡಿಕೆಯಲ್ಲಿ ವಿವಿಧ ಅಂತರ ಮತ್ತು ಮಿಶ್ರ ಬೆಳೆ ಬೆಳೆದ ಪ್ರಗತಿಪರ ರೈತರಾದ ಹಫೀಜ್‍ಉಲ್ಲಾಖಾನ್ ಮತ್ತು ಮಷಣಾಪುರದ 100 ಕ್ಕೂ ಅಧಿಕ ಅಂತರ ಮತ್ತು ಮಿಶ್ರಬೆಳೆ ಸಂಯೋಜನೆ ಮಾಡಿದ ಪ್ರಗತಿಪರ ರೈತ ಮೃತ್ಯುಂಜಯಪ್ಪರವರ ತೋಟಕ್ಕೆ ಹಾಗೂ ತುಮಕೂರಿನ ವಿವಿಧ ಜೈವಿಕಗೊಬ್ಬರ ಮತ್ತು ಜೈವಿಕ ಪೀಡೆನಾಶಕ ಉತ್ಪಾದನೆ ಮಾಡುವ ಮಲ್ಟಿಪ್ಲೆಕ್ಸ ಬಯೋಟೆಕ್ ಪ್ರೈ ಲಿ ಸಂಸ್ಥೆಗೆ ಭೇಟಿ ನೀಡಲಾಗುವುದು.

ಮೂರನೇ ದಿನ ಸೆ.21ರಂದು ಬೆಳಗ್ಗೆ 10 ಗಂಟೆಗೆ ಅಡಿಕೆಯಲ್ಲಿ ಸಂಯೋಜನೆ ಮಾಡಬಹುದಾದ ಪ್ರಮುಖಅಂತರ ಹಾಗೂ ಮಿಶ್ರ ಬೆಳೆಗಳ ಮಹತ್ವ ಮತ್ತು ಅವುಗಳ ಬೇಸಾಯ ಕ್ರಮಗಳ ಕುರಿತು ಮಾಹಿತಿ ನೀಡಲಾಗುವುದು. ತರಬೇತಿಯ ಆದ ಪ್ರಯುಕ್ತ ಆಸಕ್ತ 50 ಜನ ರೈತ ಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ  ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತ ಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನಚೀಟಿಯನ್ನು ತರಲು ಕೋರಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...