ಬೆಂಗಳೂರು: ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಂದಿದ್ದ ಆದೇಶಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪತ್ರವನ್ನ ಬರೆದಿದ್ದರು. ಇದೀಗ ಆ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ ನೀಡಿದ್ದಾರೆ. ಕನ್ನಡ ವಿದ್ಯಾರ್ಥಿಗಳಿಗೆ ಮಲಯಾಳಂ ಕಡ್ಡಾಯವಲ್ಲ ಎಂಬ ಮಾತನ್ನ ಹೇಳಿದ್ದಾರೆ.
ಈ ಸಂಬಂಧ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಹೊರರಾಜ್ಯ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯವಲ್ಲ. 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ ಕಡ್ಡಾಯಗೊಳಿಸಿಲ್ಲ. ಮಸೂದೆಯಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಕನ್ನಡ, ತಮಿಳು ಮಾತನಾಡುವ ಭಾಷಾ ಅಲ್ಪಸಂಖ್ಯಾತರ ಹಕ್ಕು ರಕ್ಷಣೆಗಾಗಿ ಈ ಮಸೂದೆಯನ್ನು ತರಲಾಗಿದೆ. ಹಕ್ಕು ರಕ್ಷಣೆಗೆ ಮಸೂದೆಯ ಸೆಕ್ಷನ್ 7 ರಲ್ಲಿ ರಕ್ಷಣಾತ್ಮಕ ನಿಯಮ ಅಳವಡಿಕೆ ಮಾಡಲಾಗಿದೆ.
ಸಚಿವಾಲಯ, ಇಲಾಖೆ ಮುಖ್ಯಸ್ಥರ ಜೊತೆ ಪತ್ರ ವ್ಯವಹಾರವನ್ನು ಕೂಡ ತಮ್ಮ ಭಾಷೆಯಲ್ಲಿಯೇ ನಡೆಸಬಹುದು ಎಂದು ಹೇಳಿದ್ದಾರೆ. ಕಚೇರಿಗಳಲ್ಲೂ ತಮ್ಮ ಮಾತೃ ಭಾಷೆಯಲ್ಲಿಯೇ ಪತ್ರ ವ್ಯವಹಾರಕ್ಕೆ ಅವಕಾಶ ನೀಡಲಾಗಿದೆ. ಜೊತೆಗೆ ಕೇರಳ ಸಚಿವಾಲಯ ಹಾಗೂ ಕಚೇರಿಗಳ ನಿಮ್ಮ ಭಾಷೆಯಲ್ಲಿ ಉತ್ತರಿಸುತ್ತದೆ. ರಾಷ್ಟ್ರೀಯ ಶಿಕ್ಷಣ ಪಠ್ಯಕ್ರಮದ ಅನ್ವಯ ಲಭ್ಯವಿರುವ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಭಾರತೀಯ ಸಂವಿಧಾನದ 346 ಮತ್ತು 347ನೇ ವಿಧಿಗಳು ಹಾಗೂ 1963 ಅಧಿಕೃತ ಭಾಷಾ ಕಾಯ್ದೆಗೆ ಈ ಭಾಷಾ ನೀತಿ ಅನುಗುಣವಾಗಿದೆ. ಕೇರಳ ಸರ್ಕಾರ ಒಕ್ಕೂಟ ವ್ಯವಸ್ಥೆಯ ಹಕ್ಕುಗಳನ್ನು ಎತ್ತಿಹಿಡಿಯುತ್ತಿದೆ. ಪ್ರತಿಯೊಬ್ಬ ನಾಗರಿಕನ ಭಾಷಾ ಗುರುತನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















