ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನಾರೋಗ್ಯ ಕಾಡಿದೆ. ಹೀಗಾಗಿ ಬೆಂಗಳೂರಿನಲ್ಲಿಯೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆಯೇ ಅನಾರೋಗ್ಯಕ್ಕೆ ತುತ್ತಾಗಿದ್ದು, ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಸಾಮಾನ್ಯ ವಾರ್ಡ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳೆದ ಕೆಲವು ದಿನಗಳಿಂದಾನು ಉಸಿರಾಟದ ಸಮಸ್ಯೆ ಇದೆ. ಹೀಗಾಗಿ ಇಂದು ಬೆಳಗ್ಗೆ ಸಮಸ್ಯೆ ಹೆಚ್ಚಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರು ನಿನ್ನೆಯೆಲ್ಲಾ ಉತ್ತರ ಕರ್ನಾಟಕದ ಪರಿಸ್ಥಿತಿ ಬಗ್ಗೆ ಅವಲೋಕನ ಮಾಡಿದ್ದರು. ಹಾಗೇ ಭಾರೀ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇದಕ್ಕೆ ಪರಿಹಾರ ನೀಡಬೇಕೆಂದು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತೇನೆ ಎಂದಿದ್ದರು.

ಅನಾರೋಗ್ಯವಿರುವ ಕಾರಣ, ಕಲಬುರಗಿಗೆ ಭೇಟಿ ನೀಡಿಲ್ಲ. ಸದಾಶಿವನಗರದ ಮನೆಯಲ್ಲಿಯೇ ಉಳಿದುಕೊಂಡಿದ್ದರು. ಇಲ್ಲಿಯೇ ಉಸಿರುಗಟ್ಟಿದ ಹಾಗೇ ಆಗಿದೆ. ತಕ್ಷಣ ಅವರನ್ನು ಹತ್ತಿರದಲ್ಲಿಯೇ ಇದ್ದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಜಿತ್ಸೆ ಕೊಡಿಸಿದ್ದಾರೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸ್ಥಿತಿ ಸುಧಾರಿಸಿಕೊಂಡಿದೆ. ವೈದ್ಯರ ಸೂಚನೆ ಮೇರೆಗೆ ಎಷ್ಟು ದಿನ ವಿಶ್ರಾಂತಿ ಬೇಕು ಎಂಬುದನ್ನು ನೋಡಿಕೊಂಡು, ಬಳಿಕ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸಲಿದ್ದಾರೆ. ಉತ್ತರ ಕರ್ನಾಟಕ ಭಾಗದ ಪ್ರವಾದಿಂದ ಉಂಟಾದ ನಷ್ಟಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಕೊಡಿಸುವ ಪ್ರಯತ್ನದಲ್ಲಿದ್ದಾರೆ.
ಇನ್ನು ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಗೆ ದಾಖಲಾದ ವಿಚಾರ ತಿಳಿದು, ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಖರ್ಗೆ ಅವರ ಆರೋಗ್ಯ ವಿಚಾರಿಸಿದ್ದಾರೆ.















