ಸುದ್ದಿಒನ್ ವೆಬ್ ಡೆಸ್ಕ್
ನವದೆಹಲಿ : ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ (ಎಲ್ಒಪಿ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಬ್ಬ ನಾಯಕ ಒಂದು ಹುದ್ದೆ ಎಂಬ ಉದಯಪುರ ನಿರ್ಣಯದ ನಂತರ, ಖರ್ಗೆ ಅವರು ತಮ್ಮ ರಾಜೀನಾಮೆಯನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.
ಪಿ ಚಿದಂಬರಂ ಅಥವಾ ದಿಗ್ವಿಜಯ್ ಸಿಂಗ್ ಅವರು ಖರ್ಗೆ ಅವರ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ.
ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ, ಶಶಿ ತರೂರ್ ಮತ್ತು ಕೆಎನ್ ತ್ರಿಪಾಠಿ ನಾಮಪತ್ರ ಸಲ್ಲಿಸಿದ್ದರು.