ಸುದ್ದಿಒನ್, ಚಿತ್ರದುರ್ಗ, ಆ.29 : ನಗರದ ಐಯುಡಿಪಿ ಬಡಾವಣೆ ಸಮೀಪದ ಕೆ.ಹೆಚ್.ಬಿ. ಕಾಲೋನಿಯ ನಿವಾಸಿ ಮಲ್ಲಿಕಾರ್ಜುನಪ್ಪ (74) ಇಂದು(ಮಂಗಳವಾರ) ಸಂಜೆ 7:30 ರ ವೇಳೆಗೆ ಅನಾರೋಗ್ಯದಿಂದ ನಿಧನರಾದರು.
ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ನಾಳೆ(ಬುಧವಾರ) ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಗುರುವಾರ ಸಂಜೆ 4.00 ಗಂಟೆಯ ನಂತರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಮವಾದ ಚಿಕ್ಕಸಿದ್ದವ್ವನಹಳ್ಳಿಯಲ್ಲಿ ನೆರವೇರಿಸಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿದೆ.
ನಿವೃತ್ತ ಪೋಸ್ಟ್ ಮಾಸ್ಟರ್ ಆಗಿದ್ದರು. ನಿವೃತ್ತಿಯ ನಂತರ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಯೋಗ ಕುರಿತು ವಿಶೇಷ ಆಸಕ್ತಿ ಹೊಂದಿದ್ದ ಇವರು ಯೋಗ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಜನರಿಗೆ ಯೋಗದ ಮಹತ್ವವನ್ನು ತಿಳಿ ಹೇಳುವ ಮೂಲಕ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ಇವರು ನಿಧನರಾದ ಸುದ್ದಿ ತಿಳಿದು ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ನಗರದ ಪ್ರಮುಖರು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.