ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ನಡೆದ ಭಬಾನಿಪುರ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು 58,389 ಮತಗಳ ಬಹುಮತದೊಂದಿಗೆ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರಿವಾಲ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಅವರು ತಮ್ಮ ತವರು ಕ್ಷೇತ್ರವಾದ ಭವಾನಿಪುರವನ್ನು ತೊರೆದು ನಂದಿಗ್ರಾಮ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಯಿಂದ ಸೋತಿದ್ದರು.
ಆದರೂ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಆರು ತಿಂಗಳ ಒಳಗಾಗಿ ಶಾಸಕರಾಗಿ ಆಯ್ಕೆಯಾಗಬೇಕಾದ ಹಿನ್ನೆಲೆಯಲ್ಲಿ ಭವಾನಿಪುರದಿಂದ ಜಯಗಳಿಸಿದ್ದ ಟಿಎಂಸಿ ಶಾಸಕ ಶೋಭಾನ್ ದೇವ್ ಚಟ್ಟೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಮತಾ ಬ್ಯಾನರ್ಜಿಯವರಿಗಾಗಿ ಅನುವು ಮಾಡಿಕೊಟ್ಟಿದ್ದರು. ಇದೀಗ ಭವಾನಿಪುರದಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದಾರೆ.
