ಗಾಂಜಾ ಅಕ್ರಮ ಸಾಗಣೆ, ಮಾರಾಟ ಆರೋಪಿಗೆ ಜೈಲು ಶಿಕ್ಷೆ

ಚಿತ್ರದುರ್ಗ,(ಜನವರಿ.06) :  ಅಕ್ರಮವಾಗಿ ಗಾಂಜಾ ಮಾರಾಟ ಮತ್ತು ಸಾಗಣೆ ಮಾಡುತ್ತಿದ್ದ ಮಂಜುಳಾಗೆ ಜಿಲ್ಲಾ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡವನ್ನು ವಿಧಿಸಿ ಜನವರಿ 5 ರಂದು ತೀರ್ಪು ನೀಡಿದೆ ಎಂದು ಅಬಕಾರಿ ಉಪ ಆಯುಕ್ತಾದ ನಾಗಶಯನ ತಿಳಿಸಿದ್ದಾರೆ.

ಕೂಡ್ಲಗಿ ತಾಲೂಕಿನ ಐಯ್ಯನಹಳ್ಳಿ ಗ್ರಾಮದ ಮಂಜುಳಾ ಎಂಬುವಳು 2019 ರ ಡಿಸೆಂಬರ್ 26 ರಂದು        ಚಿತ್ರದುರ್ಗ- ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ-50 ರ ಚಿಕ್ಕಗೂಂಡನಹಳ್ಳಿ ಸಮೀಪ ಭಾರತ್ ಪೆಟ್ರೋಲಿಯಂ ಹತ್ತಿರ ಅಕ್ರಮವಾಗಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದರು. ಇವರನ್ನು ಬಂಧಿಸಿ 7.500 ಕೆಜಿ ಒಣ ಗಾಂಜಾ ವಶಪಡಿಸಿಕೊಂಡು ಎನ್.ಡಿ.ಪಿ.ಎಸ್.ಕಾಯ್ದೆಯಡಿ ಪ್ರಕರಣವನ್ನು ಅಬಕಾರಿ ನಿರೀಕ್ಷಕರಾದ ಹೆಚ್ ದೇವರಾಜ್ ದಾಖಲಿಸಿದ್ದರು.  ಇವರ ವಿರುದ್ಧ ಘನ ನ್ಯಾಯಾಲಕ್ಕೆ ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ಐವತ್ತು ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago