ಸುದ್ದಿಒನ್, ಹಿರಿಯೂರು, ಅಕ್ಟೋಬರ್. 26 : ತಾಲೂಕಿನ ವಾಣಿವಿಲಾಸ ಜಲಾಶಯ ನಾಲ್ಕನೇ ಬಾರಿಗೆ ಕೋಡಿಬಿದ್ದಿದ್ದು, ಕೋಡಿ ವೀಕ್ಷಣೆಗೆ ಪ್ರವಾಸಿಗರು ಮುಗಿಬಿದ್ದಿದ್ದಾರೆ.
ಭಾನುವಾರ ಕೋಡಿ ಜಾಗದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡುತ್ತಿರುವ ಸಂದರ್ಭದಲ್ಲಿ ಪ್ರವಾಸಿಗನೊಬ್ಬ ನೀರಿನಲ್ಲಿ ಇಳಿದು ಹುಚ್ಛಾಟ ಮೆರೆದ ಹಿನ್ನೆಲೆಯಲ್ಲಿ ಹೊರಹರಿವಿನ ಕೊಡೆತಕ್ಕೆ ವ್ಯಕ್ತಿ ಕೊಚ್ಚಿ ಹೋಗಿದ್ದರ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದೆ.

ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಕೊಡಿ ಜಾಗದಲ್ಲಿ ಸಾರ್ವಜನಿಕ ಹೋಗದಂತೆ ಇದೀಗ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಿದ್ದಾರೆ. ಅಲ್ಲದೆ ಸಾರ್ವಜನಿಕರು ನೀರಿನಲ್ಲಿ ಇಳಿಯದಂತೆ ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









