Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಛಲವಾದಿ ಎಂದು ಬರೆಸಿ : ಸಮಾಜದ ಮುಖಂಡರಿಂದ ಜಾಗೃತಿ ಸಭೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 22 : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಛಲವಾದಿ ಎಂದು ಬರೆಸುವಂತೆ ಸಮುದಾಯದವರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಛಲವಾದಿ ಸಮಾಜದ ಮುಖಂಡರುಗಳು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಚರ್ಚಿಸಿದರು.

ಛಲವಾದಿ ಸಮಾಜದ ಮುಖಂಡ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಸಿ.ನಿರಂಜನಮೂರ್ತಿ ಸಭೆಯಲ್ಲಿ ಮಾತನಾಡುತ್ತ ನಾಗಮೋಹನ್‍ದಾಸ್ ಆಯೋಗದ ವರದಿಯಲ್ಲಿ ಪರಿಶಿಷ್ಟ ಜಾತಿ ಬಲಗೈ ಸಂಖ್ಯೆಯನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿ ಉದ್ದೇಶ ಪೂರ್ವಕವಾಗಿ ಬಲಗೈ ಸಮುದಾಯದ ಸಂಖ್ಯೆಯನ್ನು 30,08,633 ಎಂದು ತೋರಿಸಿ ಎರಡನೆ ಸ್ಥಾನದಲ್ಲಿರಿಸಿ ಅನ್ಯಾಯವೆಸಗಿದೆ. ಅದಕ್ಕಾಗಿ ಈ ಬಾರಿಯ ಸಮೀಕ್ಷೆಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ಬರೆಸಬಾರದು. ಛಲವಾದಿ ಎಂದು ನಮೂದಿಸುವಂತೆ ಮನವಿ ಮಾಡಿದರು.

ಛಲವಾದಿ ಸಮಾಜದ ಮುಖಂಡರುಗಳಾದ ಹೆಚ್.ಅಣ್ಣಪ್ಪಸ್ವಾಮಿ, ಎಸ್.ಎನ್.ರವಿಕುಮಾರ್, ಮಂಜುನಾಥ್, ಶಿವಪ್ರಸಾದ್, ಈರಜ್ಜನಹಟ್ಟಿ ತಿಪ್ಪೇಸ್ವಾಮಿ, ಚೋಳುಗುಡ್ಡದ ಚಂದ್ರು, ಜಗದೀಶ್, ಪರಮೇಶ್ ಪೂಜಾರಿ ಇವರುಗಳು ಸಭೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now