Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಂಡ್ಯ ರಮೇಶ್.. ಸಾಧುಕೋಕಿಲ ಮೇಲಿದ್ದ ಲೈಂಗಿಕ ಕಿರುಕುಳ ಆರೋಪ ರದ್ದು..!

---Advertisement---

ಬೆಂಗಳೂರು: ನಟ ಸಾಧುಕೋಕಿಲ ಹಾಗೂ ಮಂಡ್ಯ ರಮೇಶ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಇದೀಗ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ. 2017ರಲ್ಲಿ ಈ ಪ್ರಕರಣ ದಾಖಲಾಗಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಈ ಕೇಸ್ ನಿಂದ ಇಬ್ಬರು ನಟರು ಬಚಾವ್ ಆಗಿದ್ದಾರೆ.

ಕೇಸ್ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಅಂದು ಅಂದ್ರೆ 2017ರಲ್ಲಿ ಸಾಧುಕೋಕಿಲಾ ಹಾಗೂ ಮಂಡ್ಯ ರಮೇಶ್ ಇಬ್ಬರು ಮೈಸೂರಿನ ಪಾರ್ಲರ್ ಒಂದಕ್ಕೆ ಮಸಾಜ್ ಮಾಡಿಸಿಕೊಳ್ಳಲು ಹೋಗಿದ್ದರು. ಈ ವೇಳೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಇಬ್ಬರು ನಟರು ತನಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾಋಂದು ಆರೋಪ ಮಾಡಿದ್ದರು. ಈ ಸಂಬಂಧ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು.

ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ನಟರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಕೂಡ ಜಾರಿ ಮಾಡಲಾಗಿತ್ತು. 2019ರಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸದಂತೆ ಹೈಕೋರ್ಟ್ ತಡೆ ನೀಡಿತ್ತು. ಈಗ ಮತ್ತೆ ದೂರುದಾರೆಗೆ ಹಿನ್ನಡೆಯಾಗಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣವನ್ನು ಕೋರ್ಟ್ ರದ್ದು ಮಾಡಿದೆ. ಎಫ್ಐಆರ್ ನಲ್ಲಿ ಹೆಸರಿಲ್ಲ ಹಾಗೂ ಆರೋಪಕ್ಕೆ ಸಾಕ್ಷಿಗಳು ಇಲ್ಲವೆಂದು ಕೋರ್ಟ್ ನಲ್ಲಿ ವಾದ ಮಂಡಿಸಲಾಗಿದೆ. ಮಂಡ್ಯ ರಮೇಶ್ ಹಾಗೂ ಸಾಧು ಕೋಕಿಲ ಪರವಾಗಿ ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ ವಾದ ಮಂಡಿಸಿದ್ದರು. ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಸದ್ಯ ಮಸಾಜ್ ಗೆ ಹೋಗಿ ಕೇಸ್ ಹಾಕಿಸಿಕೊಂಡಿದ್ದ ಇಬ್ಬರು ಹಿರಿಯ ನಟರಿಗೆ ರಿಲ್ಯಾಕ್ಸ್ ಅನ್ನಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now