ಮಂಗಳೂರು: ಇಸ್ರೇಲ್ ನಲ್ಲಿ ಹಮಾಸ್ ಉಗ್ರರ ಅಟ್ಟಹಾಸ ಮಿತಿಮೀರಿದೆ. ಸಣ್ಣ ಸಣ್ಣ ಮಕ್ಕಳು ಎಂಬುದನ್ನು ನೋಡದೆ ಕತ್ತು ಹಿಸುಕಿ ಕೊಲ್ಲುತ್ತಿದ್ದಾರೆ. ಸಿಕ್ಕ ಸಿಕ್ಕ ಮಹಿಳೆಯರ ಜೊತೆಗೆ ಅಮಾನುಷವಾಗಿ ನಡೆದುಕೊಳ್ಳುತ್ತಿದ್ದಾರೆ. ಈ ಉಗ್ರರಿಗೆ ಜಗತ್ತೆ ಇಡೀ ಶಾಪವಾಕುತ್ತಿರುವಾಗ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳು ಎಂದಿದ್ದಾನೆ.
ಹಮಾಸ್ ಉಗ್ರರ ವಿಜಯಕ್ಕೆ ಎಲ್ಲರೂ ಪ್ರಾರ್ಥನೆ ಸಲ್ಲಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡುವ ಮೂಲಕ ಹಮಾಸ್ ಉಗ್ರರನ್ನು ದೇಶಪ್ರೇಮಿಗಳು ಎಂದಿದ್ದಾನೆ. ಅದರಲ್ಲೂ ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕವಾಗಿ ಪ್ರಾರ್ಥನೆ ಸಲ್ಲಿಸುವಂತೆ ಝಾಕೀರ್ ಕರೆ ನೀಡಿದ್ದಾನೆ.
ಸೋಷಿಯಲ್ ಮೀಡಿಯಾದಲ್ಲಿಯೇ ಈ ವಿಡಿಯೋ ಹರಿಬಿಡಲಾಗಿದೆ. ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಝಾಕೀರ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸಂಘಟನೆಗಳು ಸೇರಿದಂತೆ ಎಲ್ಲರೂ ಆತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಒಂದು ವೇಳೆ ಬಂಧಿಸದೆ ಹೋದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ನು ಝಾಕೀರ್ ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂದೇ ಗುರುತಿಸಿಕೊಂಡಿದ್ದಾನೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










