ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ನಿನ್ನೆಯೇ ಅವರನ್ನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಅವರ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಅವರ ಆರೋಗ್ಯದ ಸ್ಥಿತಿ ಬಗ್ಗೆ ವೈದ್ಯರು ವಿವರಿಸಿದ್ದಾರೆ.
ಮಣಿಪಾಲ್ ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಸದ್ಯ ದೇವೇಗೌಡ ಅವರು ಆರಾಮಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ನಿನ್ನೆಯೇ ಮಣಿಪಾಲ್ ಆಸ್ಪತ್ರೆಗೆ ಅಡ್ಮಿಟ್ ಆದ ದೇವೇಗೌಡ ಅವರು ಆದಷ್ಟು ಬೇಗ ಹುಷಾರಾಗಲಿ ಎಂಬುದೇ ಎಲ್ಲರ ಬಯಕೆಯಾಗಿತ್ತು. ಅದರಂತೆ ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆಸ್ಪತ್ರೆಯಿಂದಲೇ ತಮ್ಮ ಕೆಲಸ ಮಾಡುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.