ಮಣಿಪುರ ಘಟನೆ : ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ

 

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಪರೇಡ್ ಮಾಡಿರುವ ಭೀಕರ ವಿಡಿಯೋ ಬುಧವಾರ ವೈರಲ್ ಆಗಿದ್ದು, ಇಬ್ಬರು ಕುಕಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಾನು ರಾಷ್ಟ್ರಕ್ಕೆ ಭರವಸೆ ನೀಡಲು ಬಯಸುತ್ತೇನೆ, ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆಯುವ ಕಲಾಪಕ್ಕೆ ಸಹಕಾರ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದರು. ಈ ವೇಳೆ ಅವರು ಮಣಿಪುರದಲ್ಲಿ ನಡೆದ ಭೀಕರ ಘಟನೆಗೆ ಪ್ರತಿಕ್ರಿಯಿಸಿದ್ದಾರೆ.

ಮಣಿಪುರ ಘಟನೆ ದುಃಖಕರವಾಗಿದೆ. ಇದು ನಾಚಿಕೆಪಡಬೇಕಾದ ಸಂಗತಿ. ನಾವು ಅಮಾನವೀಯ ಘಟನೆ ಮಾಡಿದ ಯಾರನ್ನೂ ನಾವು ಬಿಡುವುದಿಲ್ಲ. ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಣಿಪುರದ ಭೀಕರತೆಯನ್ನು ಖಂಡಿಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿನ ಘಟನೆಗಳನ್ನು ಉಲ್ಲೇಖಿಸಿ “ತಮ್ಮ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವಂತೆ ನಾನು ಎಲ್ಲಾ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ, ವಿಶೇಷವಾಗಿ ಮಹಿಳೆಯರ ಘನತೆ ಕಾಪಾಡಲು ಯಾವ ಹಂತಕ್ಕೂ ಹೋಗಲೂ ಸಿದ್ಧ. ಶಾಂತಿ ಮತ್ತು ಭದ್ರತೆಯಲ್ಲಿ ರಾಜಿ ಮಾಡಿಕೊಳ್ಳಬೇಡಿ. ಅದು ರಾಜಸ್ಥಾನ, ಛತ್ತೀಸ್‌ಗಢ ಅಥವಾ ಮಣಿಪುರದಲ್ಲಿರಲಿ, ಭಾರತದ ಪ್ರತಿಯೊಂದು ಮೂಲೆಯಲ್ಲೂ ಘೋರ ಅಪರಾಧಗಳ ವಿರುದ್ಧ ಕಾರ್ಯನಿರ್ವಹಿಸಬೇಕು‌ ಎಂದರು.

Share This Article
Leave a Comment

Leave a Reply

Your email address will not be published. Required fields are marked *