ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಪರೇಡ್ ಮಾಡಿರುವ ಭೀಕರ ವಿಡಿಯೋ ಬುಧವಾರ ವೈರಲ್ ಆಗಿದ್ದು, ಇಬ್ಬರು ಕುಕಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ನಾನು ರಾಷ್ಟ್ರಕ್ಕೆ ಭರವಸೆ ನೀಡಲು ಬಯಸುತ್ತೇನೆ, ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆಯುವ ಕಲಾಪಕ್ಕೆ ಸಹಕಾರ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದರು. ಈ ವೇಳೆ ಅವರು ಮಣಿಪುರದಲ್ಲಿ ನಡೆದ ಭೀಕರ ಘಟನೆಗೆ ಪ್ರತಿಕ್ರಿಯಿಸಿದ್ದಾರೆ.
ಮಣಿಪುರ ಘಟನೆ ದುಃಖಕರವಾಗಿದೆ. ಇದು ನಾಚಿಕೆಪಡಬೇಕಾದ ಸಂಗತಿ. ನಾವು ಅಮಾನವೀಯ ಘಟನೆ ಮಾಡಿದ ಯಾರನ್ನೂ ನಾವು ಬಿಡುವುದಿಲ್ಲ. ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಣಿಪುರದ ಭೀಕರತೆಯನ್ನು ಖಂಡಿಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿನ ಘಟನೆಗಳನ್ನು ಉಲ್ಲೇಖಿಸಿ “ತಮ್ಮ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವಂತೆ ನಾನು ಎಲ್ಲಾ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ, ವಿಶೇಷವಾಗಿ ಮಹಿಳೆಯರ ಘನತೆ ಕಾಪಾಡಲು ಯಾವ ಹಂತಕ್ಕೂ ಹೋಗಲೂ ಸಿದ್ಧ. ಶಾಂತಿ ಮತ್ತು ಭದ್ರತೆಯಲ್ಲಿ ರಾಜಿ ಮಾಡಿಕೊಳ್ಳಬೇಡಿ. ಅದು ರಾಜಸ್ಥಾನ, ಛತ್ತೀಸ್ಗಢ ಅಥವಾ ಮಣಿಪುರದಲ್ಲಿರಲಿ, ಭಾರತದ ಪ್ರತಿಯೊಂದು ಮೂಲೆಯಲ್ಲೂ ಘೋರ ಅಪರಾಧಗಳ ವಿರುದ್ಧ ಕಾರ್ಯನಿರ್ವಹಿಸಬೇಕು ಎಂದರು.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…