Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಣಿಪುರ ಘಟನೆ : ಚಿತ್ರದುರ್ಗದಲ್ಲಿ ಎಐಎಂಎಸ್ ಮತ್ತು ಎಐಡಿವೈಓ ಸಂಘಟನೆಗಳಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ(ಜು.24) : ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿರುವುದರ ವಿರುದ್ಧ ಎಐಎಂಎಸ್‍ಎಸ್ ಮತ್ತು ಎಐಡಿವೈಒ ಸಂಘಟನೆಗಳು ಜಿಲ್ಲಾಧಿಕಾರಿಗಳ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಅಪರಾಧಿಗಳಿಗೆ ಕಠಿಣ ಮತ್ತು ನಿದರ್ಶನೀಯ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಲಾಯಿತು.

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಮೇಲೆ ನಡೆದ ಅಮಾನವೀಯ ಮತ್ತು ಘೋರ ಘಟನೆಯನ್ನು ಅಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ ಎಸ್) ಮತ್ತು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಓ) ಸಂಘಟನೆಗಳಯ ಉಗ್ರವಾಗಿ ಖಂಡಿಸುತ್ತವೆ.

ಮಣಿಪುರ ಎರಡು ತಿಂಗಳಿಗಿಂತ ಹೆಚ್ಚು ಕಾಲ ಹೊತ್ತಿ ಉರಿಯುತ್ತಿದೆ, ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಹಿಳೆಯರು ಅತ್ಯಾಚಾರಕ್ಕೊಳಗಾಗುತ್ತಿದ್ದಾರೆ. ಮಕ್ಕಳು ಅನಾಥರಾಗುತ್ತಿದ್ದಾರೆ. ಆದರೆ ಶಾಂತಿ ಸ್ಥಾಪನೆಗಾಗಿ ಸರ್ಕಾರವು ಯಾವುದೇ ದಿಟ್ಟಕ್ರಮ ಕೈಗೊಂಡಿಲ್ಲ.

ಕೋಮುವಾದಿ ಉದ್ರಿಕ್ತ ಪುಂಡರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿಸಿ ಮೆರವಣಿಗೆ ಮಾಡಿದೆ.
ಈ ವೀಡಿಯೋ ನೋಡಿ ಮಾನವೀಯತೆ ಉಳಿದಿರುವ ದೇಶದ ಪ್ರತಿಯೊಬ್ಬ ಪ್ರಜೆಗೂ ನಾಚಿಕೆಯಾಗುವುದರ ಜೊತೆಗೆ ಆಕ್ರೋಶ ಬರುತ್ತಿದೆ.ಇಂತಹ ಸಂದರ್ಭದಲ್ಲಿ ಸಾರ್ವಜನಿಕರ ರಕ್ಷಣೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ.

ಆದರೆ ಈ ವಿಚಾರದಲ್ಲಿ ಎರಡೂ ಸರ್ಕಾರಗಳ ಮುಖ್ಯಸ್ಥರು ಮೌನವಾಗಿದ್ದಾರೆ. ಪ್ರಧಾನಿ ಯಾವುದೇ ಒಂದು ರಾಜ್ಯದವರಲ್ಲ,ಅವರು ಇಡೀ ದೇಶದವರು, ಇಡೀ ದೇಶದ ನಾಗರಿಕರ ಹಿತದೃಷ್ಟಿಯಿಂದ ಯೋಚಿಸುವುದು ಅವರ ಕರ್ತವ್ಯ. ಆದರೆ ಈ ಪ್ರಕರಣದಲ್ಲಿ ಅವರು ಹಾಗೆ ಮಾಡದೆ ಬರೋಬ್ಬರಿ ಇಂದಿನಗಳ ನಂತರ ಮೌನ ಮುರಿದಾಗ ಇಂತಹ ಗಂಭೀರ ವಿಚಾರದಲ್ಲೂ ರಾಜಕೀಯ ಮಾಡತೊಡಗಿದರು. ಇದನ್ನು ಕೂಡ ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಅದೇ ಸಮಯದಲ್ಲಿ, ದೇಶದ ಜನತೆ ಎಲ್ಲಿದ್ದರೂ, ಯಾವುದೇ ಪರಿಸ್ಥಿತಿಯಲ್ಲಿದ್ದರೂ, ಈ ಅಮಾನವೀಯ ಘಟನೆಯನ್ನು ವಿರೋಧಿಸಬೇಕಿದೆ.. ಮಣಿಪುರದ ಜನತೆ ಯಾವುದೇ ಕೋಮುವಾದಿ ಎಚ್ಛಿದ್ರಕಾರಿ ಪ್ರಚೋದನೆಗೆ ಬಲಿಯಾಗದೆ ಕೋಮುದಳ್ಳುರಿಯಲ್ಲಿ ಬೇಯುತ್ತಿರುವ ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಹಾಗೂ ಜನೈಕ್ಯತೆಯನ್ನು ಎತ್ತಿಹಿಡಿಯಬೇಕೆಂದು ಅಲ್ಲದೇ, ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಅಪರಾಧಿಗಳಿಗೆ ಕಠಿಣ ಮತ್ತು ನಿದರ್ಶನೀಯ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಎಐಎಂಎಸ್ ಎಸ್ ಮತ್ತು ಎಐಡಿವೈಒ ಸಂಘಟನೆಗಳಿಂದ ಇಂದು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಪ್ರತಿಭಟನೆಯ ನೇತೃತ್ವವನ್ನು ಮುಖಂಡರಾದ ರವಿಕುಮಾರ್, ಸಂಚಾಲಕರಾದ ಕುಮುದ ಸುಜಾತ, ನಿಂಗರಾಜು, ಅರುಣ್, ಶಮಂತ್, ಗಿರಿಜಮ್ಮ, ಶ್ರೀದೇವಿ ವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...