Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಂಗೇಜ್ ಆದ್ರೂ ಬಿಗ್ ಬಾಸ್ ಖ್ಯಾತಿ ಮಂಜು : ಕೈಹಿಡಿಯುತ್ತಿರುವ ‘ನಂದಿನಿ’ ಯಾರೂ ಗೊತ್ತಾ..?

---Advertisement---

ಬಿಗ್ ಬಾಸ್ ಸೀಸನ್ 8ರ ವಿನ್ನರ್ ಆಗಿದ್ದ ಮಂಜು ಪಾವಗಡ ಸದ್ಯ ಎಂಗೇಜ್ ಆಗಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಇಂದು ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಂದಿನಿ ಮಜು ಬಾಳಿಗೆ ಎಂಟ್ರಿಯಾಗಿದ್ದಾರೆ. ಸದ್ಯ ನಿಶ್ಚಿತಾರ್ಥದ ಫೋಟೋಗಳು ಎಲ್ಲೆಡೆ ವೈರಲ್ ಆಗಿವೆ.

 

ನಂದಿನಿ ಅವರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಇತರೆ ಮಾಹಿತಿ ಲಭ್ಯವಿಲ್ಲ. ಮನೆಯವರ ಸಮ್ಮುಖದಲ್ಲಿ ಮಂಜು ಪಾವಗಡ ಅವರು ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ನವೆಂಬರ್ 13 ಹಾಗೂ 14ರಂದು ಮದುವೆ ನಡೆಯಲಿದ್ದು, ಇವರದ್ದು ಅರೇಂಜ್‌ ಮ್ಯಾರೇಜ್‌ ಎಂದು ಹೇಳಲಾಗಿದೆ.

ಬಿಗ್ ಬಾಸ್ ಮೂಲಕ ಬಹಳಷ್ಟು ಜನಪ್ರಿಯತೆಯನ್ನು ಗಳಿಸಿರುವ ಮಂಜು ಪಾವಗಡ ಅವರು, ಮಜಾ ಭಾರತ, ಗಿಚ್ಚಿ ಗಿಲಿ ಗಿಲಿ ಎಂಬ ರಿಯಾಲಿಟಿ ಶೋಗಳ ಮೂಲಕ ವೀಕ್ಷಕರನ್ನು ನಗಿಸುತ್ತಿರುತ್ತಾರೆ. ಇನ್ನು ಮಜಾಭಾರತ ಮೂಲಕ ಕಿರುತರೆಗೆ ಎಂಟ್ರಿ ಕೊಟ್ಟ ಮಂಜು ಪಾವಗಡ ಅವರು, ರುದ್ರಾಕ್ಷಿಪುರ, ನಾ ಮುಟ್ಟಿದ್ದೆಲ್ಲಾ ಚಿನ್ನ, ಎಲಾ ಕುನ್ನಿ, ಕಥಾ ಲೇಖನ, ವಾಸಂತಿ ನಲಿದಾಗ, ಲವ್ ಯು ಟೂ, ವೇಷ, ರೈಡರ್, ಯದಾ ಯದಾ ಹಿ, ನಾನು ನನ್ ಜಾನು, ಜಾರ್ಡನ್ ಸೇರಿದಂತೆ ಹಲವು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ. ಇದರೊಂದಿಗೆ ವೆಬ್ ಸೀರೀಸ್ ಗಳಲ್ಲಿಯೂ ನಟಿಸಿದ್ದಾರೆ.

 

ಇನ್ನು ಮಂಜು ಪಾವಗಡ ಅವರು ಬಿಗ್ ಬಾಸ್ ಸೀಸನ್ 8ರಲ್ಲಿ ಅತ್ಯುತ್ತಮವಾಗಿ ಸ್ಪರ್ಧಿಸಿ ವಿನ್ನರ್ ಆಗಿ ಹೊರ ಬಂದಿದ್ದರು. ನಂತರ ಅಂತರಪಟ ಧಾರಾವಾಹಿಯಲ್ಲಿ ಕಾಣಿಸಿಕೊಂಡರು. ಸದ್ಯ ಭಾಗ್ಯ ಧಾರಾವಾಹಿಯಲ್ಲು ನಟಿಸುತ್ತಿದ್ದಾರೆ. ಎರಡರಲ್ಲೂ ನೆಗೆಟಿವ್‌ ರೋಲ್‌ ನಲ್ಲಿ ಕಾಣಿಸಿಕೊಂಡಿರುವ ನಟ ಮಂಜು ಪಾವಗಡ ಅವರು ವೀಕ್ಷಕರ ಮನ ಗೆದ್ದಿದ್ದಾರೆ. ಇತ್ತೀಚೆಗಷ್ಟೇ ನಟ ಮಂಜು ಪಾವಗಡ ಅವರು ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment