Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಂಜುನಾಥ್ ಹತ್ಯೆ : ಹೇಗಿದೆ ಶಿವಮೊಗ್ಗದಲ್ಲಿ ವಾತಾವರಣ…?

---Advertisement---

ಶಿವಮೊಗ್ಗ, ಏಪ್ರಿಲ್. 23 :  ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ ಭಯೋತ್ಪಾದಕರ ಭೀಕರವಾದ ದಾಳಿಗೆ ಶಿವಮೊಗ್ಗದ ಮಂಜುನಾಥ್ ಪ್ರಾಣ ಕಳೆದುಕೊಂಡಿದ್ದಾರೆ. ಪುತ್ರ ಹಾಗೂ ಮಗನ ಎದುರಲ್ಲೇ ಪ್ರಾಣ ಬಿಟ್ಡಿದ್ದಾರೆ. ತಿಂಡಿ ತಿನ್ನುತ್ತಿದ್ದಾಗಲೇ ದಾಳಿ ನಡೆದಿದ್ದು, ಅಲ್ಲಿದ್ದ ಗಂಡಸರನ್ನೇ ಗುರಿಯಾಗಿಸಿಕೊಂಡು ದಾಳು ನಡೆಸಿದ್ದಾರೆ. ಅವರ ಧರ್ಮ ಕೇಳಿ ಗುಂಡು ಹಾರಿಸಿದ್ದಾರೆ. ಅದರಲ್ಲಿ ಶಿವಮೊಗ್ಗದ ಮಂಜುನಾಥ್ ಕೂಡ ಹತ್ಯೆಯಾಗಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಶಿವಮೊಗ್ಗದ ವಿಜಯನಗರದಲ್ಲಿ ಅವರ ಮನೆ ಇದ್ದು, ನೀರವ ಮೌನ ಆವರಿಸಿದೆ. ಮೃತದೇಹ ಶಿವಮೊಗ್ಗಕ್ಕೆ ಬಂದ ಮೇಲೆ ಅಂತ್ಯ ಸಂಸ್ಕಾರ ನೆರವೇರಲಿದೆ. ಅಲ್ಲಿನ ಪಾಲಿಕೆ ಆಯುಕ್ತರು ಈ ಪರಿಸ್ಥಿತಿ ಬಗ್ಗೆ ಮಾತನಾಡಿದ್ದು, ಜಮ್ಮು ಕಾಶ್ಮೀರದಿಂದ ಮಂಜುನಾಥ್ ಮೃತದೇಹ ಸಂಜೆ ವೇಳೆಗೆ ಬರಬಹುದು. ಜನ ಕೂಡ ಜಾಸ್ತಿ ಬರುವ ಸಾಧ್ಯತೆ ಇದೆ. ಹೀಗಾಗಿ ಎಸ್ಪಿ ಸರ್ ನಮಗೆಲ್ಲಾ ಸಲಹೆಯನ್ನ ನೀಡಿದ್ದಾರೆ. ಅದರ ಪ್ರಕಾರ ಬ್ಯಾರಿಕೇಡ್ ಹಾಕಿ ಭದ್ರತೆ ಒದಗಿಸಲಾಗಿದೆ. ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಸರ್ಕಲ್ ಇನ್ ಸ್ಪೆಕ್ಟರ್ ಜೊತೆ ಮಾತನಾಡಿ ಎಲ್ಲಾ ವ್ಯವಸ್ಥೆಯನ್ನ ಮಾಡಲಾಗಿದೆ.

ಜಿಲ್ಲಾಡಳಿತ, ಮಹಾನಗರ ಪಾಲಿಕೆ ವತಿಯಿಂದ ಎಲ್ಲಾ ವ್ಯವಸ್ಥೆಯನ್ನ ಮಾಡಲಾಗಿದೆ. ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ. ಅವರ ಕುಟುಂಬಸ್ಥರು ತುಂಬಾ ದುಃಖದಲ್ಲಿದ್ದಾರೆ. ಅವರು ಒಬ್ಬ ಮಗನನ್ನ ಕಳೆದುಕೊಂಡಿದ್ದಾರೆ, ತಂದೆಯನ್ನ ಕಳೆದುಕೊಂಡಿದ್ದಾರೆ. ನಾವೂ ಹೋಗಿ ಅವರ ಅಮ್ಮ ಹಾಗೂ‌ ಮಗನ ಜೊತೆಗೆ ಮಾತಾಡಿಕೊಂಡು ಬಂದ್ವಿ. ಧೈರ್ಯ ತುಂಬಿದ್ದೇವೆ. ದೇವರು ಆ ಶಕ್ತಿಯನ್ನ ನೀಡಬೇಕಿದೆ. ಮಹಾನಗರ ಪಾಲಿಕೆ ಅವರ ಜೊತೆಗೆ ಸದಾ ನಿಲ್ಲಲಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment