Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೇರಿದಂತೆ ಹಲವು ಗಣ್ಯರು ಭಾಗಿ :  ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಕರಿಗೆ ಪ್ರಶಸ್ತಿ ಪ್ರಧಾನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,ಸೆ.05: ಮಕ್ಕಳಿಗೆ ಶಿಕ್ಷಣದ ಜೊತೆಗೆ ಅವರ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಮಾರ್ಗದರ್ಶಿಗಳಾಗಿ ನಿಲ್ಲುವವರು ಶಿಕ್ಷಕರು. ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರ ಹಾಗೂ ದೇಶ ಪ್ರೇಮ ಬೆಳಸಿ ಉತ್ತಮ ಪ್ರಜೆಗಳನ್ನಾಗಿಸುವ ಜವಬ್ದಾರಿ ಶಿಕ್ಷಕರ ಮೇಲಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಕಾರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ನಗರದ ತರಾಸು ರಂಗಮಂದಿರದಲ್ಲಿ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನೋತ್ಸವ ಅಂಗವಾಗಿ ಆಯೋಜಿಸಿದ್ದ, ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ಸರ್ವೆಪಲ್ಲಿ ರಾಧಾಕೃಷ್ಣ ಅವರು ಶಿಕ್ಷಕರಾಗಿ ವಿದ್ಯಾರ್ಥಿಗಳ ಪ್ರೀತೆ ಪಾತ್ರರಾಗಿದ್ದರು. ಅವರ ಜ್ಞಾನವನ್ನು ಮಕ್ಕಳಿಗೆ ಧಾರೆ ಎರೆದರು. ಮುಂದೆ ಉಪರಾಷ್ಟ್ರಪತಿ ಹಾಗೂ ರಾಷ್ಟ್ರಪತಿಗಳಾಗಿ ಕೀರ್ತಿ ಹೊಂದಿರುವುದು ಇತಿಹಾಸ ಪುಟದಲ್ಲಿ ಸೇರಿದೆ. ಇವರ ಸ್ಮರಣಾರ್ಥ ಶಿಕ್ಷಕರ ದಿನಾಚರಣೆಯನ್ನು ಇಡೀ ರಾಷ್ಟ್ರ‌ದಲ್ಲಿ  ವಿಜೃಭಣೆಯಿಂದ ಆಚರಿಸಲಾಗುತ್ತಿದೆ ಎಂದರು.

ಒಬ್ಬ ಶಿಕ್ಷಕ ಮನಸ್ಸು ಮಾಡಿದರೆ ಏನು ಬೇಕಾದರು ಮಾಡಬಹುದು, ಗುರು ಎಂಬ ಪದವು ಶ್ರೇಷ್ಠವಾದುದ್ದು, ಪ್ರತಿಯೊಂದು ರಂಗದಲ್ಲೂ ಗುರು ಇರುತ್ತಾರೆ, ಗುರುವಿನ ಅರ್ಶಿವಾದ ಇದ್ದರೆ ಏನನ್ನು ಬೇಕಾದರು  ಸಾಧಿಸಬಹುದು. ಈ ಬಾರಿಯ  ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಇದೇ ರೀತಿಯಾಗಿ ಮುಂದಿನ ವರ್ಷವು ಉತ್ತಮ ಫಲಿತಾಂಶ ತಂದುಕೊಡಲು ಶಿಕ್ಷಕರೆಲ್ಲರು ಶ್ರಮಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಎಲ್ಲರನ್ನೂ ಸಮಾನ ರೀತಿಯಲ್ಲಿ ನೋಡುವ ಶಿಕ್ಷಕರಿಗೆ ಮಾತ್ರ ಸಾಧ್ಯ. ಮಕ್ಕಳಿಗೆ ಬಹಳ ಸಮಾಧಾನದಿಂದ ಶಿಕ್ಷಣ ನೀಡಿದರೆ ದೇಶ ಭವಿಷ್ಯವನ್ನು ರೂಪಿಸುವಂತಹ ದೊಡ್ಡ ವ್ಯಕ್ತಿಗಳಾಗಿ ಬೆಳೆಯುತ್ತಾರೆ ಎಂದರು.

ಸೈನಿಕರನ್ನು, ಅಧಿಕಾರಿಗಳನ್ನು, ನಾಯಕರುಗಳನ್ನು ಎಲ್ಲಾರನ್ನು ತಯಾರು ಮಾಡುವ ವೃತ್ತಿ ಅಂದರೆ ಅದು ಶಿಕ್ಷಕರ ವೃತ್ತಿಯಾಗಿದೆ. ತಂದೆ-ತಾಯಿಗಳು ಮಕ್ಕಳನ್ನ ಮಾತ್ರ ಪ್ರೀತಿ ಮಾಡುತ್ತಾರೆ. ಶಿಕ್ಷಕರು ಎಲ್ಲಾ ಮಕ್ಕಳ ಮೇಲೆ ಪ್ರೀತಿಯಿಂದ ನೊಡುತ್ತಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಮಾತನಾಡಿ, ಶಿಕ್ಷಕರ ದಿನಾಚರಣೆ ನಾವೇಲ್ಲರೂ ಶಿಕ್ಷಕರಿಗೆ ಗೌರವ ಸಲ್ಲಿಸುವ ಸಮಾರಂಭವಾಗಿದೆ. ಗುರುವಿನಲ್ಲೇ ದೇವರನ್ನು ಕಾಣುವ ದೇಶ ಅಂದರೆ ಅದು ಭಾರತ, ಬದುಕಿನ ಕೊನೆಯತನಕ ನೆನಪಿಸಿಕೊಳ್ಳುವುದು ಗುರುವನ್ನು ಮಾತ್ರ, ಮಕ್ಕಳನ್ನು ತಿದ್ದುವುದರ ಜೊತೆಗೆ ಅವರ ಜವಾಬ್ದಾರಿಯು ಕೂಡ ಶಿಕ್ಷಕರ ಮೇಲೆ ಇರುತ್ತದೆ. ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಹೆಚ್ಚು ಇರುತ್ತದೆ, ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸುವುದು ಶಿಕ್ಷಕರು ಮಾತ್ರ, ಶಿಕ್ಷಣ ಕಲಿಸುವುದರ ಜೊತೆಗೆ ಸಮಾಜದ ಕೆಲಸಗಳನ್ನು ನಿರ್ವಹಿಸುತ್ತಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಮಾತನಾಡಿ, ಬೆಳವಣಿಗೆಯಲ್ಲಿ ಹಾಗೂ ಸಮಾಜದಲ್ಲಿ ಬದುಕಲು ಎಲ್ಲಾ ಗುಣಗಳನ್ನು ಕಲಿಸುವುದು ಗುರುಗಳು ಮಾತ್ರ, ಗುರುವಿಲ್ಲ ಎಂದರೆ ಜೀವನದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ. ಶಿಕ್ಷಕರು ಮಕ್ಕಳಿಗೆ ಶ್ರದ್ಧೆ ಹಾಗೂ ಮನಸ್ಸಿನಿಂದ ಶಿಕ್ಷಣವನ್ನು ಕಲಿಸುತ್ತಾರೆ. ನಿಮ್ಮ ಸಹಾಕರದಿಂದಲೇ ನಮ್ಮ ಭಾರತ ದೇಶ ಸಧೃಢವಾಗಿತ್ತಾದೆ. ಶಿಕ್ಷಕರು ದೊಡ್ಡ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಚಿತ್ರದುರ್ಗ ಜಿಲ್ಲೆ ಶೈಕ್ಷಣಿಕವಾಗಿ ಮೊದಲೇ ಸ್ಥಾನವನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಹಾಗೂ ವಿಶೇಷ ಶಿಕ್ಷಕರ ಪ್ರಶಸ್ತಿಗೆ ಭಾಜನಾರದವರಿಗೆ ನಗದು ಪುಸ್ಕಾರದೊಂದಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಿ.ಟಿ.ಇ ಪ್ರಾಂಶುಪಾಲರು ಹಾಗೂ ಪದನಿಮಿತ್ತ ಸಹ ನಿರ್ದೇಶಕಿ ಟಿ.ಜಿ. ಲೀಲಾವತಿ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ. ತಿಮ್ಮಾರೆಡ್ಡಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ, ಡಯಟ್ ಉಪನಿರ್ದೇಶಕರು ಹಾಗೂ ಪ್ರಾಂಶುಪಾಲರು ಎಂ. ನಾಸೀರ್ ಉದ್ದೀನ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ನಾಗಭೂಷಣ್ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ತಾಲ್ಲೂಕುವಾರು ಶಿಕ್ಷಕರು ಇದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ತರಾಸು ರಂಗಮಂದಿರವವರೆಗೆ ಸರ್ವೆಪಲ್ಲಿ ರಾಧಕೃಷ್ಣರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!