Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಔಷಧಿಯಿಂದ ಗುಣಪಡಿಸಲಾಗದ ಎಷ್ಟೋ ಕಾಯಿಲೆಗಳು ಯೋಗದಿಂದ ಗುಣಮುಖ : ಡಾ. ನಾರದಮುನಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್‌. 21 : ಯೋಗ ಒಂದು ವರದಾನ ಇದ್ದಂತೆ. ಔಷಧಿಯಿಂದ ಗುಣಪಡಿಸಲಾಗದ ಎಷ್ಟೋ ಕಾಯಿಲೆಗಳನ್ನು ವಾಸಿ ಮಾಡುವ ಶಕ್ತಿಯನ್ನು ಯೋಗ ಹೊಂದಿದೆ ಎಂದು ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ. ನಾರದಮುನಿ ಹೇಳಿದರು.

ಭಾರತ ಸೇವಾದಳ, ಆಯುಷ್ ಇಲಾಖೆ, ಮಹಿಳಾ ಪತಾಂಜಲಿ ಸಮಿತಿ ವತಿಯಿಂದ ಇಂದು ನಗರದ ಭಾರತ ಸೇವಾದಳ ಭವನದಲ್ಲಿ 12ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಗಿಡಕ್ಕೆ ನೀರೆರೆಯುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಮಾನವನಿಗೆ ದೈನಂದಿಕ ಚಟುವಟಿಕೆಗಳ ಜೊತೆಗೆ ಮಾನಸಿಕವಾಗಿ ಆರೋಗ್ಯವಾಗಲು ಯೋಗ ಪ್ರಾಣಾಯಾಮ ಧ್ಯಾನ ಅಗತ್ಯವಾಗಿದೆ ಎಂದು ತಿಳಿಸಿದರು. ವಿಶ್ವಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸುತ್ತಲ್ಲಿದ್ದು ಇನ್ನೂ ಜಾಗೃತೆಯನ್ನು ಮೂಡಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾರ್ಯದರ್ಶಿ ನರೇನಹಳ್ಳಿ ಅರುಣ್ ಕುಮಾರ್ ಅವರು ಮಾತನಾಡಿ ಯೋಗ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ಇರಬೇಕು ಎಂದು ತಿಳಿಸಿದರು. ಜಿಲ್ಲಾದ್ಯಂತ ಹಲವಾರು ಯೋಗ ಕೇಂದ್ರಗಳು ನಡೆಯುತ್ತಿದ್ದು ಅಂತಹ ಕೇಂದ್ರಗಳಿಗೆ ಪ್ರೋತ್ಸಾಹ ಸಿಗಬೇಕೆಂದು ತಿಳಿಸಿದರು. ಸಂಸ್ಥೆಗಳು ಆಯೋಜಿಸುವ ಯೋಗ ಶಿಬಿರಕ್ಕೆ ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಿ ಅದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಯೋಗ ಶಿಕ್ಷಕಿಯಾದ ಶ್ರೀಮತಿ ಹೇಮಾವತಿ ರವರು ಯೋಗ ಮತ್ತು ಧ್ಯಾನ ಪ್ರಾಣಾಯಾಮ ಅನುಷ್ಠಾನ ಅಗತ್ಯತೆ ಕುರಿತು ಉಪನ್ಯಾಸ ನೀಡಿ ಯೋಗ ಶಿಕ್ಷಣವನ್ನು ನೀಡಿದರು.

ವಲಯ ಸಂಘಟಕರಾದ ಎಂ. ಅಣ್ಣಯ್ಯನವರು ಪ್ರಸ್ತಾವಿಕವಾಗಿ ಮಾತನಾಡಿ ಭಾರತ ಸೇವಾದಳದ ಯೋಗ ಮತ್ತು ನೈತಿಕ ಶಿಕ್ಷಣ ರಾಜ್ಯದ ಎಲ್ಲಾ ಶಾಲೆಗಳ ಶಿಕ್ಷಕರಿಗೆ ತರಬೇತಿ ನೀಡಿ ಅವರ ಮೂಲಕ ಮಕ್ಕಳಿಗೆ ಯೋಗ ಶಿಕ್ಷಣ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶೋಭಾ ಅವರು ಸರ್ವರನ್ನು ಸ್ವಾಗತಿಸಿದರು. ಗೌತಮಿ ವಂದಿಸಿದರು. ರಾಜಪ್ಪ ನಿರೂಪಿಸಿದರು. ಯೋಗ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗ ಅಭ್ಯಾಸ ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now