ಬೆಂಗಳೂರು.ಸೆಪ್ಟೆಂಬರ್.13 : ಬಿಜೆಪಿ-ಜೆಡಿಎಸ್ ನ ಸಾಕಷ್ಟು ಮಂದಿ ಟಚ್ ನಲ್ಲಿದ್ದಾರೆ. ನನ್ನ ಜೊತೆಗೆ ಚರ್ಚೆ ಮಾಡಿದ್ದಾರೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ .
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್ ಅವರು, ಬಿಜೆಪಿ-ಜೆಡಿಎಸ್ ನ ಸಾಕಷ್ಟು ಮಂದಿ ಟಚ್ ನಲ್ಲಿದ್ದಾರೆ. ನನ್ನ ಜೊತೆಗೆ ಚರ್ಚೆ ಮಾಡಿದ್ದಾರೆ ಪಕ್ಷದ ಅಧ್ಯಕ್ಷರ ಜೊತೆಗೆ ಕೆಲವರು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ನಂಬಿ ಬರುವವರಿಗೆ ಅವಕಾಶ ಇದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಾಯಕತ್ವವನ್ನು ನಂಬಿ ಬರುವವರಿಗೆ ಪಕ್ಷದ ಬಾಗಿಲು ಯಾವಾಗಲೂ ತೆರೆದಿರುತ್ತದೆ ಎಂದು ತಿಳಿಸಿದ ಅವರು, “ಪಕ್ಷದ ತತ್ವಗಳನ್ನು ಒಪ್ಪಿಕೊಂಡು ಬರುವವರಿಗೆ ಸೂಕ್ತ ಅವಕಾಶ ಕಲ್ಪಿಸಲಾಗುವುದು,” ಎಂದರು











