Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನಿ ಮೋದಿ ಹುಟ್ಟುಹಬ್ಬದಂದು ಹಲವು ಯೋಜನೆಗಳಿಗೆ ಚಾಲನೆ

---Advertisement---

ನವದೆಹಲಿ: ಇಂದು ಪ್ರಧಾನಿ ನರೇಂದ್ರ‌ ಮೋದಿಯವರ ಹುಟ್ಟುಹಬ್ಬ. 73ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ ಅವರಿಗೆ ಗಣ್ಯರು, ಅಭಿಮಾನಿಗಳು, ಬೆಂಬಲಿಗರು ಶುಭಕೋರಿದ್ದಾರೆ‌. ಅದಷ್ಟೇ ಅಲ್ಲ ರಾಜ್ಯ ಬಿಜೆಪಿ ನಾಯಕರಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಕೂಡ ನಡೆದಿದೆ.

ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಪ್ರಧಾನಿ ಮೋದಿಯವರ ಆರೋಗ್ಯ, ಆಯಸ್ಸಿನ ಹೆಚ್ಚಳಕ್ಕೆ ಪ್ರಾರ್ಥನೆ ಸಲ್ಲಿಸಿದ್ದಾರೆ. ನರೇಂದ್ರ‌ ಮೋದಿ‌ ಮತ್ತೆ ಪ್ರಧಾನಿಯಾಗಬೇಕು. ಮೋದಿಗೆ ನಮ್ಮದೇ ಆದ ಬಲ ನೀಡಿ ಪ್ರೋತ್ಸಾಹಿಸಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಇನ್ನು ಮೋದಿ ಅವರು ತಮ್ಮ ಹುಟ್ಟುಹಬ್ಬದ ಅಂಗವಾಗಿ ಹಲವು ಕಾರ್ಯಕ್ರಮಗಳ ಯೋಜನೆಗೆ ಚಾಲನೆ ನೀಡುವ ಯೋಜನೆ ಹಾಕಿಕೊಂಡಿದ್ದಾರೆ. ದೆಹಲಿ ದ್ವಾರಕ‌ ಮೆಟ್ರೋ ಸ್ಟೇಷನ್ ಗೆ ಚಾಲನೆ ನೀಡಲಾಗಿದೆ. ಬಳಿಕ ಮೆಟ್ರೋದಲ್ಲಿಯೇ ಪ್ರಯಾಣಿಕರ ಜೊತೆ ಮೋದಿ ಮಾತುಕತೆ ನಡೆಸಿದ್ದಾರೆ.

ವಿಶ್ವಕರ್ಮ ಯೋಜನೆಗಾಗಿ 13 ಸಾವಿರ ಕೋಟಿ ಮೊತ್ತದ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆಯಿಂದ ಕುಶಲಕರ್ಮಿಗಳಿಗೆ ಅನುಕೂಲವಾಗಲಿದೆ‌. ಇದರ ಜೊತೆಗೆ ಯಶೋಭೂಮಿ ಲೋಕಾರ್ಪಣೆಯನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದಾರೆ. ಯಶೋಭೂಮಿಗೆ ಚಾಲನೆ ಸಿಕ್ಕಿದೆ.

ಯಶೋಭೂಮಿ ಕನ್ವೆಷನ್ ಹಾಲ್ ತುಂಬಾ ದೊಡ್ಡಮಟ್ಟದ್ದಾಗಿದೆ. 15 ಸಮಾವೇಶ ಕೊಠಡಿಗಳನ್ನು ಹೊಂದಿದೆ. ಆಡಿಟೋರಿಯಂ, ಭವ್ಯವಾದ ಬಾಲ್ ರೂಂ ಕೂಡ ಹೊಂದಿದೆ. ದೆಹಲಿ ಏರ್ಪೋರ್ಟ್ ಹಾಗೂ ಮೆಟ್ರೋಗೂ ಸಂಪರ್ಕವಿದೆ. ಒಮ್ಮೆಗೆ 11 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment