Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಮಾರ್ಗರೇಟ್ ಲವರ್ ರಾಮಾಚಾರಿ ಚಿತ್ರದ ಚಿತ್ರೀಕರಣ : ನಿರ್ದೇಶಕ ಗಿರಿಧರ್ ಕುಂಬಾರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಮೇ.30) : ಮಾರ್ಗರೇಟ್ ಲವರ್ ರಾಮಾಚಾರಿ ಚಿತ್ರದ ಎರಡನೆ ಹಂತದ ಚಿತ್ರೀಕರಣ ಹದಿನೈದು ದಿನಗಳ ಕಾಲ ಚಿತ್ರದುರ್ಗದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ದೇಶಕ ಗಿರಿಧರ್ ಕುಂಬಾರ್ ತಿಳಿಸಿದರು.

ದುರ್ಗದ ಸಿರಿ ಹೋಟೆಲ್‍ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದುರ್ಗದ ಕೋಟೆ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲಿ ಎರಡನೆ ಹಂತದ ಚಿತ್ರೀಕರಣ ನಡೆಯಲಿದೆ.

ಬೆಂಗಳೂರಿನಲ್ಲಿ ಮೂರನೆ ಹಂತದ ಶೂಟಿಂಗ್ ನಡೆಸಲಿದ್ದೇವೆ. ಸಮಾಜದಲ್ಲಿ ಹುಡುಗಿಯರನ್ನು ಯಾವ ರೀತಿ ಕಾಣಲಾಗುತ್ತಿದೆ. ಯಾವುದನ್ನು ಜಡ್ಜ್ ಮಾಡಬಾರದು ಎನ್ನುವುದು ಚಿತ್ರದ ತಿರುಳು ಎಂದು ಹೇಳಿದರು.

ಚಿತ್ರದ ನಿರ್ಮಾಪಕ ಹರೀಶ್ ಮಾತನಾಡಿ ಇದೊಂದು ಫ್ರೆಂಡ್‍ಶಿಫ್ ಸ್ಟೋರಿ. ಚಿತ್ರದಲ್ಲಿ ಎಲ್ಲಾ ಹೊಸ ಮುಖಗಳಿವೆ. ಚಿತ್ರದುರ್ಗದ ಏಳುಸುತ್ತಿನ ಕೋಟೆಯನ್ನು ರಾಜ್ಯಕ್ಕೆ ಪರಿಚಯಿಸಬೇಕೆಂಬುದು ನಮ್ಮ ಉದ್ದೇಶ. ಕೋಟೆಯ ಬಗ್ಗೆ ನಮಗಂತೂ ಅಪಾರ ಅಭಿಮಾನವಿದೆ. ಮೇ.31 ರಿಂದ ಜೂ.20 ರವರೆಗೆ ಚಿತ್ರೀಕರಣ ನಡೆಯಲಿದೆ ಎಂದರು.
ನಟ ಅಭಿಲಾಷ್, ನೋನಲ್ ಮಾಂತೇರೋ, ಯಶ್‍ಶೆಟ್ಟಿ, ತಲ್ವಾರ್ ಸುಮನ್, ಜಹಾಂಗೀರ್, ಮನುಗೌಡ ಪತ್ರಿಕಾಗೋಷ್ಠಿಯಲ್ಲಿದ್ದರು.

ನಿಹಾಂತ್ ಪ್ರೊಡಕ್ಷನ್ಸ್‍ನ ಶ್ರೀಮತಿ ವನಿತಾ ಹೆಚ್.ಎನ್. ಹರೀಶ್‍ರವರ ನಿರ್ಮಾಣದ ಮಾರ್ಗರೇಟ್ ಲವೌರ್ ಆಫ್ ರಾಮಾಚಾರಿ ಚಿತ್ರದ ಎರಡನೆ ಹಂತದ ಚಿತ್ರೀಕರಣಕ್ಕೆ ಐತಿಹಾಸಿಕ ಚಿತ್ರದುರ್ಗದ ಕೋಟೆಯಲ್ಲಿರುವ ಏಕನಾಥೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಮಂಗಳವಾರ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

ವೀರೇಂದ್ರ ಕೋಗುಂಡೆ ಮಠರವರು ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣ ಯಶಸ್ವಿಯಾಗಲೆಂದು ಹಾರೈಸಿದರು.
ನಟ ಹಾಗೂ ಚಿತ್ರದ ನಿರ್ಮಾಪಕರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!