ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರರಂಗದಲ್ಲಿ ಮದುವೆ ಬಾಗ್ಯಗಳು ಜೋರಾಗಿದೆ. ಹಿರಿತೆರೆ ಮತ್ತು ಕಿರುತೆರೆಯಲ್ಲಿ ಮುದುವೆಯ ದಿಬ್ಬಣ ಜೋರಾಗಿಯೇ ಹೊರಟಿದೆ. ಇತ್ತಿಚೆಗಷ್ಟೇ ಸತ್ಯ ಸೀರಿಯಲ್ ಕಾರ್ತಿಕ್ ಅಲಿಯಾಸ್ ಸಾಗರ್, ಪಾರು ಧಾರಾವಾಹಿಯ ಆದಿ ಅಲಿಯಾಸ್ ಶರತ್ ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅಣ್ಣನ ಮದುವೆಯಾದ ಬಳಿಕ ತಮ್ಮನ ಮದುವೆ ಕೆಲಸಗಳು ಆರಂಭವಾಗಿದೆ. ಅಂದ್ರೆ ಪಾರು ಧಾರಾವಾಹಿಯ ಪ್ರೀತು ಅಲಿಯಾಸ್ ಸಿದ್ದುಮೂಲಿಮನಿ ಮದುವೆ ಡೇಟ್ ಫಿಕ್ಸ್ ಆಗಿದೆ.
ಗಟ್ಟಿಮೇಳ ಧಾರಾವಾಹಿಯ ಅದಿತಿ ಅಲಿಯಾಸ್ ಪ್ರಿಯಾ ಆಚಾರ್ಯ ಮತ್ತು ಸಿದ್ದು ಮೂಲಿಮನಿ ರಿಯಾಲಿಟಿ ಶೋ ಒಂದರ ಮೂಲಕ ಪರಿಚಯವಾಗಿ, ಬಳಿಕ ಧಮಾಕ ಸಿನಿಮಾದಲ್ಲೂ ಒಟ್ಟಿಗೆ ನಟಿಸಿದ್ದರು. ಈ ವೇಳೆ ಇಬ್ಬರ ನಡುವೆ ಇದ್ದ ಸ್ನೇಹ ಪ್ರೇಮವಾಗಿ ಬದಲಾಗಿದೆ. ಮನೆಯವರ ಒಪ್ಪಿಗೆ ತೆಗೆದುಕೊಂಡು ಇತ್ತಿಚೆಗಷ್ಟೇ ಎಂಗೇಜ್ಮೆಂಟ್ ಕೂಡ ಮಾಡಿಕೊಂಡಿದ್ದರು. ಇದೀಗ ಮದುವೆ ದಿನಾಂಕ ನಿಗದಿಯಾಗಿದೆ.
ಫೆಬ್ರವರಿ ತಿಂಗಳಲ್ಲಿಯೇ ಇಬ್ಬರು ಮದುವೆಯಾಗುತ್ತಿದ್ದಾರೆ. ಖಾಸಗಿ ರೆಸಾರ್ಟ್ ಒಂದರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಧಾರಾವಾಹಿ ಮತ್ತು ಸಿನಿಮಾಗಳನ್ನು ಒಟ್ಟೊಟ್ಟಿಗೆ ಬ್ಯಾಲೆನ್ಸ್ ಮಾಡುತ್ತಿರುವ ಈ ಜೋಡಿ ಮದುವೆಯ ಬಂಧನಕ್ಕೆ ಒಳಗಾಗುತ್ತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್