ಮಣಿಪುರದಲ್ಲಿ ಕೆಲ ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಆ ಪ್ರತಿಭಟನೆ ಈಗ ಹಿಂಸಾಚಾರಕ್ಕೆ ತಿರುಗಿದೆ. ಹಕವೆಡೆ ಬೆಂಕಿ ಹಚ್ಚಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಮಣಿಪುರದ ಮಹಿಳಾ ಬಾಕ್ಸರ್ ಮೇರಿ ಕೋಮ್ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ.
ಮೇರಿ ಕೋಮ್ ಟ್ವೀಟ್ ಮಾಡುವ ಮೂಲಕ, ‘ನನ್ನ ರಾಜ್ಯ ಮಣಿಪುರ ಬೆಂಕಿಯಲ್ಲಿ ಸುಡುತ್ತಿದೆ. ದಯವಿಟ್ಟು ಸಹಾಯ ಮಾಡಿ ಎಂದು ಮೇರಿಕೋಮ್ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ಅವರಿಗೆ ಟ್ಯಾಗ್ ಮಾಡಿದ್ದಾರೆ.
ಮಿಯಾಇ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿರ್ಧಾರವನ್ನು ವಿರೋಧಿಸಿ ಈ ಗಲಾಟೆ ನಡೆಯುತ್ತಿದೆ. ಮಣಿಪುರದ ಎಂಟು ಜಿಲ್ಲೆಯಲ್ಲಿ ಕರ್ಪ್ಯೂ ವಿಧಿಸಲಾಗಿದೆ. ಐದು ದಿನಗಳವರೆಗೆ ಇಂಟರ್ನೆಟ್ ಸೇವೆ ಬಂದ್ ಮಾಡಲಾಗಿದೆ. ದಿನೇ ದಿನೇ ಹಿಂಸಾಚಾರ ಹೆಚ್ಚಾಗುತ್ತಿದೆ. ಹಿಂಸಾಚಾರವನ್ನು ತಡೆಯಲು ಅಲ್ಲಿನ ಸರ್ಕಾರ ಕೂಡ ಎಲ್ಲಾ ರೀತಿಯ ಭದ್ರತೆ ಮಾಡುತ್ತಿದೆ.