Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜೃಂಭಣೆಯಿಂದ ನೆರವೇರಿದ ಮಸ್ಕಲ್ ಕರಿಯಮ್ಮ ದೇವಿ ಜಾತ್ರೆ

---Advertisement---

ಸುದ್ದಿಒನ್, ಹಿರಿಯೂರು, ಜುಲೈ. 15 : ತಾಲೂಕಿನ ಮಸ್ಕಲ್ ಗ್ರಾಮದ ಗ್ರಾಮ ದೇವತೆ ಶ್ರೀ ಕರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ಬಹಳ ಅದ್ದೂರಿಯಾಗಿ ನೆರವೇರಿತು. ಆಷಾಡ ಮಾಸದಲ್ಲಿ ಈ ಜಾತ್ರೆಯನ್ನು ಆಚರಿಸಲಾಗುತ್ತದೆ. ಮೂರು ವರ್ಷಕ್ಕೊಮ್ಮೆ ಜಾತ್ರೆ ಅದ್ದೂರಿಯಾಗಿ ನಡೆಯಿತು.

ಜಾತ್ರೆ ಅಂಗವಾಗಿ ದೇವಿಗೆ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಮಂಗಳವಾರ ಬೆಳಿಯಿಂದಲೂ ರಾತ್ರಿಯವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಜಾತ್ರಾ ಮಹೋತ್ಸವ ಅಂಗವಾಗಿ ದೇವರಿಗೆ ಮಸ್ಕಲ್, ಟಿಬಿ ಗೊಲ್ಲರಹಟ್ಟಿ, ಚಿತ್ರದೇವರಹಟ್ಟಿ, ಮಲ್ಲೇಣು, ದೇವಿ ಕಾಲೋನಿ, ಪುಟ್ಟಯ್ಯನಕಟ್ಟೆ ಗ್ರಾಮಸ್ಥರು ತಂಡೋಪತಂಡವಾಗಿ ಕುಟುಂಬದ ಸದಸ್ಯರೊಂದಿಗೆ ಬಂದು ಪೂಜೆ ಸಲ್ಲಿಸಿದರು. ಇದೇ ವೇಳೆ ಮಹಿಳೆಯರು ದೇವಿಗೆ ತಂಬಿಟ್ಟಿನ ಆರತಿ ಬೆಳಗಿದರು. ತಾಲೂಕಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಕೈವಾಡಸ್ಥರು, ಸಾವಿರಾರು ಭಕ್ತರು ಸುತ್ತ ಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment